Featured

ಹೆಣ್ಣು ಮಕ್ಕಳು ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಬದ್ದ ಎಂದು ನಿರೂಪಿಸಿದ್ದಾರೆ : ಅರಗ ಜ್ಞಾನೇಂದ್ರ – Vishwanews24

ಹೆಣ್ಣು ಮಕ್ಕಳು ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಬದ್ದ ಎಂದು ನಿರೂಪಿಸಿದ್ದಾರೆ : ಅರಗ ಜ್ಞಾನೇಂದ್ರ – Vishwanews24

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೆಣ್ಣು ಅಬಲೆಯಲ್ಲ ಹಾಗೂ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಮಾಜದ ರಕ್ಷಣೆಗೆ ಬದ್ದ ಎಂದು ನಿರೂಪಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಇಂದು ಮೈಸೂರಿನ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ನಡೆದ, 45ನೇ ತಂಡದ ಆರಕ್ಷಕ ಉಪನಿರೀಕ್ಷಕರ (ಸಿವಿಲ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಹಳ ಜನ ಹೇಳುತ್ತಾರೆ ಪೊಲೀಸ್ ಠಾಣೆಗಳಿಗೆ ಮರ್ಯಾದಸ್ಥರು ಹೋಗವ ಸ್ಥಳವಲ್ಲ ಅಂತಾ. ಪೊಲೀಸ್‌ ಠಾಣೆಯಲ್ಲಿ ಇರುವವರು ಉನ್ನತ ಶಿಕ್ಷಣ ಪಡೆದುಕೊಂಡು ಬಂದಿರುತ್ತಾರೆ, ಅಲ್ಲದೆ ಶಿಕ್ಷಣ, ತರಬೇತಿ ಪಡೆದವರು ಯಾರಿಗೂ ಹಿಂಸೆ ಕೊಡುವುದಿಲ್ಲ ಎಂದರು.

ಇದನ್ನೂ ಓದಿ :

ಇನ್ನು ಈ ಬಾರಿ ಸುಮಾರು 228 ಪ್ರಶಿಕ್ಷಣಾರ್ಥಿಗಳು ಇಂದು ತರಬೇತಿ ಮುಗಿಸಿ ಸೇವೆಗೆ ಸಜ್ಜಾಗಿದ್ದು, ಅದರಲ್ಲೂ ಪುರುಷ ಪ್ರಶಿಕ್ಷಣಾರ್ಥಿಗಳಿಗೆ ಸರಿಸಾಟಿಯಾಗಿ 45 ಮಂದಿ ಮಹಿಳೆಯರು ತರಬೇತಿ ಮುಗಿಸಿ, ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದಾರೆ ಎಂದು ಅವರನ್ನು ಪ್ರಶಂಸಿಸಿದರು.

ಹೆಣ್ಣು ಮಕ್ಕಳು ಅಬಲೆಯಲ್ಲ ಹಾಗೂ ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಆಕೆ ಬದ್ದ ಎಂದು ನಿರೂಪಿಸಿದ್ದಾರೆ ಎಂದರು.

ತರಬೇತಿ ಮುಗಿಸಿ ಸೇವೆಗೆ ತೆರಳುತ್ತಿರುವ ತಾವುಗಳು ಸಮಾಜವಿರೋಧಿ ಶಕ್ತಿಗಳಿಗೆ ಭಯ ಹುಟ್ಟಿಸಬೇಕು. ಅದೇ ಸಮಯದಲ್ಲಿ ಕಾನೂನು ಗೌರವಿಸುವ ನಾಗರಿಕರಿಗೆ ಅಭಯ ನೀಡುವ ಕೆಲಸ ಮಾಡಬೇಕು, ಕೆಲವು ಪೊಲೀಸರು ಅನಿಷ್ಟತನ ಮಾಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ನೀವು ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬೇಡಿ. ನೀವು ರಕ್ಷಕರಾಗಬೇಕೆ ಹೊರತು ಯಾರ ಗುಲಾಮರಾಗಬಾರದು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago