Featured

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ; ಫೆ. 7ರಂದು ಚಾಲನೆ : ಸಚಿವ ಕೋಟ – Vishwanews24

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ; ಫೆ. 7ರಂದು ಚಾಲನೆ : ಸಚಿವ ಕೋಟ – Vishwanews24

ಬೆಂಗಳೂರು: ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಕರ್ನಾಟಕ ಸರಕಾರ ‘ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ’ಯನ್ನು ಪರಿಚಯಿಸುತ್ತಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಅನುಷ್ಠಾನಗೊಳ್ಳುವ ಈ ಯೋಜನೆಗೆ ಫೆ. 7ರಂದು ಚಾಲನೆ ಸಿಗಲಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರ ವಹಿಸಿದ ತಕ್ಷಣ, ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಇಲಾಖಾ ಹಾಸ್ಟೆಲ್‌ಗಳಲ್ಲಿ ಕರಾಟೆ ತರಬೇತಿ ನೀಡುವ ಯೋಜನೆಯ ಕುರಿತು ಪ್ರಸ್ತಾವಿಸಿದ್ದರು. ಅದರಂತೆ ಈಗಾಗಲೇ ರಾಜ್ಯಾದ್ಯಂತ ಪ್ರಾಯೋಗಿಕವಾಗಿ 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ. 7ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಲಾಖೆಯಿಂದ ಸಮವಸ್ತ್ರ ವಿತರಣೆ:
ಈ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಲಾಖಾಧಿಕಾರಿಗಳ ಸಭೆ ನಡೆಸಿ, ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ತಲಾ 100 ಮಕ್ಕಳು ಕಲೆಯನ್ನು ಪ್ರದರ್ಶಿಸಲಿದ್ದಾರೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆಯ ವತಿಯಿಂದ ಸಮವಸ್ತ್ರ ನೀಡಲು ಸಿದ್ಧತೆ ನಡೆಸಲಾಗಿದೆ. ಉತ್ತಮ ಗುಣಮಟ್ಟದ ಸಮವಸ್ತ್ರಗಳನ್ನು ವಿತರಿಸಲು ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ :

1700ಕ್ಕೂ ಅಧಿಕ ಸಂಸ್ಥೆಗಳಲ್ಲಿ ಜಾರಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 629 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳ ಸುಮಾರು 50ಸಾವಿರ ಹೆಣ್ಣುಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 257 ಹಾಸ್ಟೆಲ್‌ಗಳ 30ಸಾವಿರ ಹೆಣ್ಣುಮಕ್ಕಳು ಹಾಗೂ 818 ಕ್ರೈಸ್ ವಸತಿ ಶಾಲೆಗಳ 1.02 ಲಕ್ಷ ಹೆಣ್ಣುಮಕ್ಕಳು ತರಬೇತಿ ಪಡೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 1704 ಹಾಸ್ಟೆಲ್‌ಗಳು ಮತ್ತು ವಸತಿ ಶಾಲೆಗಳ 1.82 ಲಕ್ಷ ಹೆಣ್ಣು ಮಕ್ಕಳು ಈ ಯೋಜನೆಯಲ್ಲಿ ಆತ್ಮ ರಕ್ಷಣೆ ಕಲೆಯ ತರಬೇತಿ ಪಡೆಯುವ ಗುರಿ ಹೊಂದಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಹಿಳಾ ತರಬೇತುದಾರರ ನಿಯೋಜನೆ:
ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆಯ ತರಬೇತಿ ನೀಡಲು ಮಹಿಳಾ ತರಬೇತುದಾರರನ್ನೇ ನಿಯೋಜಿಸಲಾಗುತ್ತದೆ. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಮಹಿಳಾ ತರಬೇತುದಾರರು ಮಕ್ಕಳನ್ನು ತರಬೇತುಗೊಳಿಸುತ್ತಾರೆ. ಈಗಾಗಲೇ 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ತರಬೇತಿ ಪ್ರಾರಂಭಗೊಂಡಿದ್ದು, ಗೌರವ ಧನದ ಆಧಾರದಲ್ಲಿ ಸಾವಿರಕ್ಕೂ ಮಿಕ್ಕಿ ತರಬೇತುದಾರರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಯೋಜನೆ ಲಾಂಛನ ಬಿಡುಗಡೆ: ಸಚಿವ ಕೋಟ
ಈಗಾಗಲೇ ಪ್ರಾಯೋಗಿಕವಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ಜಾರಿಗೊಳಿಸಲಾಗಿದೆ. ನೂರರಷ್ಟು ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಈಗಾಗಲೇ ಕರಾಟೆ ತರಬೇತಿ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಇದನ್ನು ಅಧಿಕೃತವಾಗಿ ಉದ್ಘಾಟಿಸಿ, ಯೋಜನೆಯ ಲಾಂಛನ ಬಿಡುಗಡೆ ಮಾಡುತ್ತಾರೆ. ಹೆಣ್ಣು ಮಕ್ಕಳು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಈ ಆತ್ಮರಕ್ಷಣೆ ಕಲೆ ಪ್ರಯೋಜನಕಾರಿ ಎಂದು ಸಚಿವರು ಹೇಳಿದರು

ಇದನ್ನೂ ಓದಿ :

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago