Featured

ಹೆಣ್ಮಕ್ಕಳಿಗಾಗಿ ತಾಯಿ, ಮಗು ಆಸ್ಪತ್ರೆ ನಿರ್ಮಾಣ : ಪ್ರಚಾರದ ಕೊನೇ ದಿನ ಗ್ಯಾರಂಟಿ ಘೋಷಿಸಿದ ಡಿಕೆಶಿ – Vishwanews24

ಹೆಣ್ಮಕ್ಕಳಿಗಾಗಿ ತಾಯಿ, ಮಗು ಆಸ್ಪತ್ರೆ ನಿರ್ಮಾಣ : ಪ್ರಚಾರದ ಕೊನೇ ದಿನ ಗ್ಯಾರಂಟಿ ಘೋಷಿಸಿದ ಡಿಕೆಶಿ

ಬೆಂಗಳೂರು: ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಹೆಣ್ಮಕ್ಕಳಿಗಾಗಿ ತಾಯಿ, ಮಗು ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.

ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರೋದು ತಪ್ಪಿಸುತ್ತೇವೆ ಎಂದರು.

ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ಡೋಂಟ್ ತ್ರೆಟನ್ ಅಸ್, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್‌ಮೇಲ್‌ಗೆ ಹೆದರಲ್ಲ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರವು ಈಗಾಗಲೇ ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿದ್ದು, ಇದೀಗ ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.

Vishwa News 24

Recent Posts

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

4 minutes ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

15 minutes ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

23 minutes ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

31 minutes ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

38 minutes ago

ದಸರಾ ಸಂಭ್ರಮಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್: ಅ.11ರಿಂದ 20ರವರೆಗೆ ಮಂಗಳೂರಿನಿಂದ ವಿಶೇಷ ಬಸ್ ಸೇವೆ – vishwanews24

ಅ.11 ರಿಂದ 20ರವರೆಗೆ ಮಂಗಳೂರು-ಉಡುಪಿ ಕೆಎಸ್‌ಆರ್‌ಟಿಸಿಯಿಂದ ದಸರಾ ಸ್ಪೆಷಲ್ ಟೂರ್ ಪ್ಯಾಕೇಜ್ ಮಂಗಳೂರು: ನವರಾತ್ರಿ ಹಾಗೂ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ…

44 minutes ago