Featured

ಹೆತ್ತವರಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ :  ಡಾ| ಯೋಗೀಶ್ ಆಚಾರ್ಯ – Vishwanews24

ಹೆತ್ತವರಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ :  ಡಾ| ಯೋಗೀಶ್ ಆಚಾರ್ಯ

“ಸಕಾಲದಲ್ಲಿ ಪೌಷ್ಠಿಕಾಂಶ ಆಹಾರ ಸೇವನೆ, ವಯಸ್ಸಿಗೆ ತಕ್ಕಂತೆ ನಿದ್ದೆ, ವಿರೋಧಾಭಾಸ ಮಾತುಗಳ ಬಗ್ಗೆ ಎಚ್ಚರಿಕೆ, ಪ್ರತಿದಿನ ಮನೆಯ ಮಕ್ಕಳೊಂದಿಗೆ ಇರಲು ನಿರ್ದಿಷ್ಠ ಸಮಯ ನಿಗದಿಪಡಿಸುವುದು, ಸಮಾಜದ ಇತರರೊಂದಿಗೆ ಸಕಾರಾತ್ಮಕ ವರ್ತನೆ, ಯಾವುದೇ ಕಾರಣಕ್ಕೂ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವಾಗ ಪಲಾಯನವಾದವಾಗದಂತೆ ನೋಡಿಕೊಳ್ಳುವುದು ಇವೇ ಮೊದಲಾದ ಉದಾತ್ತ ನಡವಳಿಕೆ ಗಳು ಹೆತ್ತವರಲ್ಲಿ ಮಾತ್ರವಲ್ಲ ತಮ್ಮ ಮಕ್ಕಳಲ್ಲೂ ಅದು ಅನುಕರಣೆಯಾಗುವಂತೆ ನೋಡಿಕೊಂಡಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ” ಎಂದು ಉಡುಪಿ ಕುತ್ಪಾಡಿಯ ಎಸ್ ಡಿ ಎಮ್ ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ| ಯೋಗೀಶ್ ಆಚಾರ್ಯ ಹೇಳಿದ್ದಾರೆ.
ಅವರು ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ೨೦೨೨-೨೩ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳ ಹೆತ್ತವರನ್ನು ಉದ್ದೇಶಿಸಿ ಈ ಮಾತನ್ನು ಹೇಳಿದರು. ಬೆಳಿಗ್ಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ| ತ್ರಿವೇಣಿ ವೇಣುಗೋಪಾಲ್ ನಿರ್ವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕ ವಿಕ್ರಂ ಆಚಾರ್ಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಗಣಪತಿ ಕಾರಂತ್ ಪ್ರಸ್ಥಾವನಾ ಮಾತುಗಳನ್ನಾಡಿದರು. ಶಾಲಾ ಸಂಚಾಲಕ ಶ್ರೀ ಸುರೇಶ್ ಶೆಣೈ, ಶಾಲಾ ಆಡಳಿತ ಮಂಡಳಿಯ ಸದಸ್ಯ ಶ್ರೀ ಕೃಷ್ಣಕುಮಾರ್ ರಾವ್ ಮಟ್ಟು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ಗಣೇಶ್ ಕುಮಾರ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಾಜೀವಿ ಉಮೇಶ್ ಕರ್ಕೇರಾ, ಕೋಶಾಧಿಕಾರಿ ಶ್ರೀಮತಿ ಅಶ್ವಿನಿ ದೇವೇಂದ್ರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಕು| ಪ್ರಮೀಳಾ ವಂದನಾರ್ಪಣೆ ಮಾಡಿದರು.
Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

4 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

46 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

51 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago