ಬೆಂಗಳೂರು: ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.
ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಹಾಕಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಸುಚನಾ ಸೇಠ್ ಳನ್ನು ನಿನ್ನೆ ಚಿತ್ರದುರ್ಗದ ಐಮಂಗಲ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದರು. ನಂತರ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ತಾನು ಹೆತ್ತ ಮಗುವನ್ನೇ ತನ್ನ ಕೈಯಾರೆ ಕೊಲ್ಲುವಂಥ ಕ್ರೂರ ನಿರ್ಧಾರವನ್ನು ಏಕೆ ಮಾಡಿದರು ಎಂದು ಸತ್ಯ ತಿಳಿಯಲು ಖಾಕಿಪಡೆ ಸುಚನಾರನ್ನು ತೀವ್ರ ವಿಚಾರಣೆ ಗೊಳಪಡಿಸುತ್ತಿದೆ.
ಇಂದು ಅಂತ್ಯಸಂಸ್ಕಾರ: ಮಗುವಿನ ಮೃತದೇಹ ಬೆಂಗಳೂರಿನಲ್ಲಿ ಸುಚನಾ ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಕರೆತರಲಾಗುತ್ತಿದ್ದು ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ಮಗುವಿನ ತಂದೆ ವೆಂಕಟ ರಾಮನ್ ಇಂಡೋನೇಷಿಯಾದಿಂದ ಚಿತ್ರದುರ್ಗಕ್ಕೆ ಬಂದು ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸಿದ್ದು ಇಂದು ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ ನಡೆಸಲಿದ್ದಾರೆ.
6 ದಿನ ಪೊಲೀಸ್ ಕಸ್ಟಡಿಗೆ: ಸುಚನಾರ ಹಿನ್ನೆಲೆ, ಪತಿ ವೆಂಕಟರಮಣ ಜೊತೆ ಇದ್ದ ಸಂಬಂಧ, ಕುಟುಂಬ ಹಾಗೂ ಮಗುವಿನ ಹತ್ಯೆಗೆ ವಿಚಾರಣೆಗೊಳಪಡಿಸಲು ಸುಚನಾಳನ್ನು ಗೋವಾ ಪೊಲೀಸರು 6 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಪತಿ ವೆಂಕಟರಮಣರನ್ನು ಸಹ ಕರೆಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…