ಕುಂದಾಪುರ: ಕುಂದಾಪುರ ಬಸ್ರೂರು ಮೂರುಕೈನಿಂದ ವಿನಾಯಕ-ಕೋಡಿ ಜಂಕ್ಷನ್ ವರೆಗೆ ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಶುಕ್ರವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃತಕ ಕೆರೆ ಸೃಷ್ಟಿಯಾಗಿದೆ.
ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಂಡ-ಗುಂಡಿಗಳು ನಿರ್ಮಾಣಗೊಂಡು ಶನಿವಾರ ಬೆಳಿಗ್ಗೆನಿಂದ ಕಿಲೋಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮೀನುಗಾರಿಕಾ ಇಲಾಖೆಯ ಕಾರ್ಯಕ್ರಮದ ಸಲುವಾಗಿ ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರಕ್ಕೆ ಆಗಮಿಸಿದ್ದು ಕಾರ್ಯಕ್ರಮ ಮುಗಿಸಿ ವಾಪಾಸ್ ಮಂಗಳೂರಿನತ್ತ ತೆರಳುವಾಗ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯವರು ಕೃತಕ ಕೆರೆ ಸೃಷ್ಟಿಯಾದ ಸ್ಥಳದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ತಡೆದು ಆಕ್ರೋಷ ವ್ಯಕ್ತಪಡಿಸಿದರು. ಹೆದ್ದಾರಿಕಾಮಗಾರಿ ಆರಂಭದ ದಿನದಿಂದಲೂ ಇಲ್ಲಿ ಇದೇ ಸಮಸ್ಯೆ ಉಂಟಾಗುತ್ತಿದ್ದು ಸಮಸ್ಯೆ ಶೀಘ್ರ ಪರಿಹರಿಸುವಂತೆ ಹೋರಾಟ ಸಮಿತಿಯವರು ಹಾಗೂ ಸ್ಥಳೀಯರು ಸಚಿವರನ್ನು ಒತ್ತಾಯಿಸಿದರು. ಈ ವೇಳೆ ಸಚಿವರು ಮತ್ತು ಹೋರಾಟ ಸಮಿತಿ ಪದಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಸ್ಥಳದಲ್ಲೇ ಡಿಸಿಯವರ ಬಳಿ ಮಾತನಾಡಿದ ಸಚಿವರು ಶೀಘ್ರ ಸಮಸ್ಯೆ ಬಗೆಹರಿಸಲು ಸೂಚಿಸಿದರು. ಈ ಸಂದರ್ಭ ಮಾತನಾಡಿದ ಸಚಿವ ಕೋಟ, ಡಿಸಿ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂದಪಟ್ಟವರಿಗೆ ಮಾತನಾಡಿ ಸಮಸ್ಯೆ ಪರಿಹಾರಿಸಲು ಸೂಚಿಸಿದ್ದೇನೆ ಎಂದರು.
ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಕಿಶೋರ್ ಕುಮಾರ್ ಕುಂದಾಪುರ, ರಾಜೇಶ್ ಕಾವೇರಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಶಶಿಧರ ಹೆಮ್ಮಾಡಿ, ಗಣೇಶ್, ಸ್ಥಳೀಯ ಆಟೋ ಚಾಲಕರು, ಅಂಗಡಿ ಮಾಲಿಕರು ಉಪಸ್ಥಿತರಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…