ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ.
ಅಂಬೇಡ್ಕರ್ ಕುರಿತ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ, ಈ ವಿಷಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್‌ನ ಎಲ್ಲ ಸದಸ್ಯರು ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿಕಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆದಿದೆ. ಇದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮುಂದೂಡಿದರು.
ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸದನದಲ್ಲಿ ಮಾತಿನ ಚಕಮಕಿ ನಡೆಯಿತು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದರು. ದೂರು ಸ್ವೀಕರಿಸಿದ ಸಭಾಪತಿ, ಆಡಿಯೊ ವಿಡಿಯೋ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…