ಹೆಬ್ರಿ: ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಿವಪುರ ಗ್ರಾಮದ ರಾಂಪುರ ಎನ್ನುವಲ್ಲಿ ಜ. 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಸಂಭವಿಸಿದೆ.
ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತ ದುರ್ದೈವಿ.
ಹೆಬ್ರಿ ಕಡೆ ಬರುತ್ತಿದ್ದ ರಾಹುಲ್ ಚಲಾಯಿಸುತ್ತಿದ್ದ ಬೈಕ್‌ಗೆ ಎದುರುಗಡೆಯಿಂದ ಬಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೋಟಾರ್ ಸೈಕಲ್ ಸವಾರ ರಸ್ತೆಗೆ ಬಿದ್ದಿದ್ದು, ಅವರಿಗೆ ತೀವ್ರ ಸ್ವರೂಪದ ಗಾಯವಾಗಿತ್ತು.
ರಾಹುಲ್ ಅವರನ್ನು ಸುರೇಶ ಅವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಫಲಕಾರಿಯಾಗಲಿಲ್ಲ. ಜ. 4ರ ರಾತ್ರಿ ಮುಳ್ಳುಗುಡ್ಡೆ ಶಾಲೆಯಲ್ಲಿ ನಡೆದ ನಾಟಕವನ್ನು ನೋಡಿ ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…