ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಎಂಬುವವರು ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ.
ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ಸಾತ್ವಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾತ್ವಿಕ್ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದರು ಮತ್ತು ಪದವಿ ವ್ಯಾಸಂಗ ಮಾಡುವ ಕನಸುಕಂಡಿದ್ದರು.
ತನ್ನ ಓದಿನ ಖರ್ಚು ಹಾಗೂ ಕುಟುಂಬದ ಆರ್ಥಿಕ ಹೊರೆಗೆ ನೆರವಾಗುವ ಉದ್ದೇಶದಿಂದ, ರಜಾ ದಿನಗಳಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೇವಲ ವಿದ್ಯಾಭ್ಯಾಸದಲ್ಲಿ ಅಲ್ಲದೆ, ಕೃಷಿ ಚಟುವಟಿಕೆಗಳಲ್ಲೂ ಆಸಕ್ತಿ ಹೊಂದಿದ್ದ ಇವರು ಕುಟುಂಬದ ಮುಖ್ಯ ಆಧಾರಸ್ತಂಭವಾಗಿದ್ದರು.
ಇದನ್ನೂ ಓದಿ:
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…