Featured

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು -vishwanews24

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು

ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ.

ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃತದೇಹ ಕಾರಿನೊಳಗೆ ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ಮರ ತೆರವುಗೊಳಿಸಿದ ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

12 hours ago