ಹೆಬ್ರಿ: ಪ್ರಯಾಣಿಕ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿನಡೆದಿದೆ.
ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಮೇಗರವಳ್ಳಿಯಲ್ಲಿ ಸುರಕ್ಷಾ ಎಂಬವರು ಏರಿದ್ದರು. ಆಗುಂಬೆ ಘಾಟಿ ತಲುಪುವಷ್ಟರಲ್ಲಿ ಸುರಕ್ಷಾ ತೀವ್ರ ಅಸ್ವಸ್ಥಗೊಂಡರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕ ವಾಸಿಮ್ ದೇಸಾಯಿ ಸಹಾಯಕ್ಕೆ ಧಾವಿಸಿದ್ದು, ಚಾಲಕ ತಾರೇಶ್ ಬಸ್ಸನ್ನು ನೇರವಾಗಿ ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕೊಂಡೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಸುರಕ್ಷಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲಿ. ಈ ಹಿನ್ನೆಲೆಯಲ್ಲಿ ಆಕೆಯನ್ನು ಬಸ್ ಸಿಬ್ಬಂದಿ ಅಲ್ಲಿಂದ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿಗೆ ಕರೆತಂದಿದ್ದಾರೆ. ಈ ವೇಳೆ ಹೆಬ್ರಿ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಪೊಲೀಸರು ಸೋಮೇಶ್ವರ ದಿಂದ ಹೆಬ್ರಿಯ ಆಸ್ಪತ್ರೆಯ ತನಕ ಟ್ರಾಫಿಕ್ ಸಮಸ್ಯೆ ಆಗದಂತೆ ಸಹಕರಿಸಿದ್ದಾರೆ. ಸುರಕ್ಷಾರನ್ನು ಹೆಬ್ರಿ ಸರಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ.
ಬಸ್ ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಅವರ ಮಾನವೀಯ ಕಳಕಳಿಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…