ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ವರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿದೆ.
ಇತ್ತೀಚೆಗೆ ವರುಣ್ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಿಂದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿದೆ.
‘ವರುಣ್ ಸಿಂಗ್ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್‌ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…