Featured

ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ – VIshwanews24

ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ – VIshwanews24

ನವದೆಹಲಿ: ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್ ಸಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿದೆ.

ಇತ್ತೀಚೆಗೆ ವರುಣ್‌ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಿಂದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿದೆ.

‘ವರುಣ್‌ ಸಿಂಗ್‌ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್‌ನಲ್ಲಿ ವರುಣ್‌ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago