ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ. ಒಂದು ವೇಳೆ ದುರ್ಬಳಕೆ ಮಾಡಿಕೊಂಡರೆ ಪ್ರಶಸ್ತಿಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಚ್ಚರಿಕೆ ನೀಡಿದೆ.
ಇಂದು ಲೋಕಸಭೆಯಲ್ಲಿ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು, ರಾಷ್ಟ್ರೀಯ ಪ್ರಶಸ್ತಿಗಳಾದ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಗೌರವಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ ಎಂದು ಹೇಳಿದರು.
ಪ್ರಶಸ್ತಿಗಳನ್ನು ದುರುಪಯೋಗ ಪಡಿಸಿಕೊಂಡರೆ ಆ ವ್ಯಕ್ತಿಯೂ ರಾಷ್ಟ್ರೀಯ ಪ್ರಶಸ್ತಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಅಹಿರ್ ಅವರು ಹೇಳಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…