Featured

ಹೆಸರಿನ ಜೊತೆ ರಾಷ್ಟ್ರಪ್ರಶಸ್ತಿಗಳನ್ನು ಬಳಸುವಂತಿಲ್ಲ , ಗೌರವಗಳು ಬಿರುದುಗಳಲ್ಲ : ಕೇಂದ್ರ ಸರ್ಕಾರ – Vishwanews24

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ. ಒಂದು ವೇಳೆ ದುರ್ಬಳಕೆ ಮಾಡಿಕೊಂಡರೆ ಪ್ರಶಸ್ತಿಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಚ್ಚರಿಕೆ ನೀಡಿದೆ.

ಇಂದು ಲೋಕಸಭೆಯಲ್ಲಿ  ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು, ರಾಷ್ಟ್ರೀಯ ಪ್ರಶಸ್ತಿಗಳಾದ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಗೌರವಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ ಎಂದು ಹೇಳಿದರು.

ಪ್ರಶಸ್ತಿಗಳನ್ನು ದುರುಪಯೋಗ ಪಡಿಸಿಕೊಂಡರೆ ಆ ವ್ಯಕ್ತಿಯೂ ರಾಷ್ಟ್ರೀಯ ಪ್ರಶಸ್ತಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಅಹಿರ್ ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

10 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

14 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

14 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

15 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

15 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

16 hours ago