ಉಡುಪಿ: ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿತ್ತು. ಇದೀಗ ಈ ಸುದ್ದಿಗೆ ಸಚಿವೆ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
ಶೋಭಾ ಕರಂದ್ಲಾಜೆ ಹೆಸರು ಬದಲಿಸುವ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ ಎಂದು ಗರಂ ಆದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು. ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: RSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ : ಸಿಎಂ ಬೊಮ್ಮಾಯಿ – Vishwanews24
ಹೆಸರು ಬದಲಾವಣೆ: ಬಿಜೆಪಿ ಯಲ್ಲಿ ಒಂದು ವರ್ಗದ ಪ್ರಕಾರ 2023ರ ಚುನಾವಣೆಗೆ ತಯಾರಿ ನಡೆಸಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಅವರು ಶೋಭಾ ಗೌಡ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…