Featured

ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ : ಸಿಎಂ ಸಿದ್ದರಾಮಯ್ಯ  – vishwanews24

ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ; ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ  ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೂಮಿ ಪೂಜೆಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಎರಡೂವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಅಂತ ಸ್ಪಷ್ಟಪಡಿಸಿದರು.

ಇನ್ನೂ ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರು ದುಡ್ಡು ಇಲ್ಲ ಅಂತಾರೆ. ದುಡ್ಡು ಇಲ್ಲದೆ ಮಾಡೋಕೆ ಆಗುತ್ತಾ? ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಾರೆ ಎಂದು ಕಿಡಿಕಾರಿದರು.

ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ. ಗ್ಯಾರಂಟಿಗಳಿಗೆ 1 ಲಕ್ಷ ಕೋಟಿ ಖರ್ಚು ಮಾಡಿದ್ದೇವೆ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನೇ ಕೇಳೋದು. ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago