ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೂಮಿ ಪೂಜೆಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಎರಡೂವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಅಂತ ಸ್ಪಷ್ಟಪಡಿಸಿದರು.
ಇನ್ನೂ ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರು ದುಡ್ಡು ಇಲ್ಲ ಅಂತಾರೆ. ದುಡ್ಡು ಇಲ್ಲದೆ ಮಾಡೋಕೆ ಆಗುತ್ತಾ? ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಾರೆ ಎಂದು ಕಿಡಿಕಾರಿದರು.
ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ. ಗ್ಯಾರಂಟಿಗಳಿಗೆ 1 ಲಕ್ಷ ಕೋಟಿ ಖರ್ಚು ಮಾಡಿದ್ದೇವೆ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನೇ ಕೇಳೋದು. ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…