Featured

ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ – vishwanews24

ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಇತ್ತೀಚೆಗೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ  ವರ್ಗಾಯಿಸಿದ್ದಾರೆ.

ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸದ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಮೇ 11 ರಂದು ಚೈತ್ರಾಗೌಡ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್‍ನಲ್ಲಿ ಖಿನ್ನತೆಗೆ ಒಳಗಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿತ್ತು. ಅವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಗಳೂರು ವಕೀಲರ ಸಂಘದಿಂದ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದು ಚೈತ್ರಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಚೈತ್ರಾ ಕೇವಲ ವಕೀಲೆ ಅಷ್ಟೇ ಆಗಿರದೆ ಒಳ್ಳೆಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು. ಅಲ್ಲದೇ ಅತ್ಯಂತ ದಿಟ್ಟ ಮಹಿಳೆ ಹಾಗೂ ಧೈರ್ಯವಂತೆಯಾಗಿದ್ದರು ಎಂಬ ಮಾತುಗಳು ಅವರ ಬಗ್ಗೆ ಕೇಳಿಬಂದಿತ್ತು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago