ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನ ರಾಮಂತಪುರದ ಗೋಕುಲೇನಗರದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.
ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (15) ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶ್ರೀಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಲಾಗುತ್ತಿತ್ತು ಈ ವೇಳೆ ರಥವನ್ನು ಎಳೆಯುತ್ತಿದ್ದ ವಾಹನ ಕೆಟ್ಟು ನಿಂತಿದ್ದರಿಂದ, ಯುವಕರೆಲ್ಲರೂ ಸೇರಿ ಕೈಯಿಂದಲೇ ದೂಡಿಕೊಂಡು ಮೆರವಣಿಗೆ ಮುನ್ನೆಡೆಸುತ್ತಿದ್ದ ಸಂದರ್ಭ ರಥ ರಸ್ತೆ ಬದಿ ಹಾದುಹೋದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಈ ವೇಳೆ ರಥ ದೂಡುತ್ತಿದ್ದ 9 ಮಂದಿಗೆ ವಿದ್ಯುತ್ ಆಘಾತವಾಗಿದೆ. ಪರಿಣಾಮ 5 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದರೆ ನಾಲ್ಕು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…