Featured

ಹೈದರಾಬಾದ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಜಾಮ್ ಸಂಸ್ಕೃತಿಯಿಂದ ಮುಕ್ತ : ಅಮಿತ್ ಶಾ -Vishwanews24

ಹೈದರಾಬಾದ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಜಾಮ್ ಸಂಸ್ಕೃತಿಯಿಂದ ಮುಕ್ತ : ಅಮಿತ್ ಶಾ -Vishwanews24

ಹೈದರಾಬಾದ್: ಹೈದರಾಬಾದ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಿಜಾಮ್ ಸಂಸ್ಕೃತಿಯಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ನಿಮಿತ್ತ ಮುತ್ತಿನ ನಗರಿಯಲ್ಲಿ ಪ್ರಚಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹೈದರಾಬಾದ್ ಅನ್ನುಶೀಘ್ರ ನವಾಬ್, ನಿಜಾಮ್ ಸಂಸ್ಕೃತಿಯಿಂದ ಮುಕ್ತಗೊಳಿಸಿ. ಇಲ್ಲಿ ಮಿನಿ ಭಾರತ ಸ್ಥಾಪಿಸುವುದಾಗಿ ಅವರು ಹೇಳಿದರು. ಇದೇ ವೇಳೆ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತರ ಪ್ರತಿಭಟನೆ ಕುರಿತು ಭಾನುವಾರ ಅಮಿತ್ ಶಾ ಹೇಳಿಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರ ಅಭಿಪ್ರಾಯಗಳಿಗೆ ತದ್ವಿರುದ್ಧವಾಗಿದೆ. ಆಂದೋಲನ ನಡೆಸುತ್ತಿರುವ ರೈತರು ಆಯೋಜಿಸಿರುವ “ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲವಿದೆ ಎಂದು ಹರಿಯಾಣ ಸಿಎಂ ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ನ ಪಂಜಾಬ್ ಘಟಕದ ಅಧ್ಯಕ್ಷ ಜಗ್ಜಿತ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಸಚಿವ ಅಮಿತ್ ಷಾ ಅವರು ಷರತ್ತಿನ ಮೇಲೆ ಆರಂಭಿಕ ಸಭೆ ಕರೆಯುವುದು ಒಳ್ಳೆಯದಲ್ಲ ಷರತ್ತು ರಹಿತ, ಮುಕ್ತ ಹೃದಯದಿಂದ ಮಾತುಕತೆಗೆ ಮುಂದಾಗಬೇಕು ಎಂದು ಆಗ್ರಹಪಡಿಸಿದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

3 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

3 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

4 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

6 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

6 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago