Featured

ಹೊಟ್ಟೆಪಾಡಿಗಾಗಿ ಜಾತ್ರೆಗಳಲ್ಲಿ ವ್ಯಾಪಾರ ಮಾಡುವವರಿಗೆ ನಿಷೇಧ ಹೇರುವುದು ಸಂವಿಧಾನ ವಿರೋಧಿ ನಿಲುವಾಗಿದೆ : ರಮೇಶ ಕಾಂಚನ್ – Vishwanews24

ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಬಡವರು..

ಅವರಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲ..

ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಅವರು ಅವರ ಹಾಗೂ ಅವರ ಕುಟುಂಬದ ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುತ್ತಾರೆ..

ಉಡುಪಿ: ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಬಡವರು. ಅವರಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಅವರು ಅವರ ಹಾಗೂ ಅವರ ಕುಟುಂಬದ ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುತ್ತಾರೆ. ಇಂತಹ ವ್ಯಾಪಾರಿಗಳಿಗೆ ನಿಷೇಧ ಹೇರುವುದು ಸಂವಿಧಾನ ವಿರೋಧಿ ನಿಲುವಾಗಿದೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಹೇಳಿದ್ದಾರೆ.

ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವ ಜನರು ಎಲ್ಲಾ ಧರ್ಮಗಳ ಜಾತ್ರೆಯಲ್ಲಿ ಇರುತ್ತಾರೆ. ಎಲ್ಲಾ ಧರ್ಮದಲ್ಲಿಯೂ ಇಂತಹ ವ್ಯಾಪಾರಸ್ಥರನ್ನು ನಾವು ನೋಡಬಹುದು. ಇತ್ತೀಚಿನ ದಿನಗಳಲ್ಲಿ ಒಂದು ಧರ್ಮದ ಧಾರ್ಮಿಕ ಕಾರ್ಯಕ್ರಮಕ್ಕೆ ಇನ್ನೊಂದು ಧರ್ಮದವರನ್ನು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಹೇಳುವುದು ಸೌಹಾರ್ದತೆಗೆ ಧಕ್ಕೆ ತರುವಂತದಾಗಿದೆ ಹಾಗೂ ಸಂವಿಧಾನ ವಿರೋಧಿ ನಿಲುವು ಆಗಿರುತ್ತದೆ. ಈಗಾಗಲೇ ಕೊರೋನಾ ಎಂಬ ಮಹಾಮಾರಿಯಿಂದ ಜನರಿಗೆ ಬದುಕಲು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಬಡ ವ್ಯಾಪಾರಸ್ಥರಿಗೆ ತಮ್ಮ ದಿನನಿತ್ಯದ ಅವಶ್ಯಕತೆಗೊಸ್ಕರ ವ್ಯಾಪಾರ ಮಾಡಲು ಜಿಲ್ಲಾಡಳಿತ ಮತ್ತು ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಯಾವುದೇ ಜಾತಿ, ಮತಭೇದ ನೋಡದೆ ಈ ಬಡ ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕಾಗಿ ಆಗ್ರಹಿದ್ದಾರೆ.

ಇದೇ ಸಂದರ್ಭದಲ್ಲಿ ಮುಲ್ಕಿಯ ಪ್ರಸಿದ್ಧ ದೇವಸ್ಥಾನವಾದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮಂಡಳಿಯು ತೆಗೆದುಕೊಂಡ ನಿರ್ಧಾರವು ಸೌಹಾರ್ದತೆಯನ್ನು ಮೂಡಿಸುವಂತದಾಗಿದೆ. ಈ ನಿಲುವನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago