ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ – vishwanews24

Featured, ಉಡುಪಿ, ರಾಜ್ಯ ನ್ಯೂಸ್

ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ

ಚಿಕ್ಕಮಗಳೂರು: ಶೃಂಗೇರಿ ಶಾರದಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಯಾದ ಬೆನ್ನಲ್ಲೇ ಇದೀಗ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿದೆ.

ಸಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಆಡಳಿತ ಮಂಡಳಿ ಹೇಳಿದೆ.ಆಧುನಿಕ ಉಡುಪು ಧರಿಸಿ ದೇವಸ್ಥಾನಕ್ಕೆ ಭಕ್ತರು ಬರುವುದರಿಂದ ಇತರೆ ಭಕ್ತರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡಿದೆ.

ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ವಾಹನ ಚಲಾವಣೆ ; ಚಾಲಕನ ವಿರುದ್ದ ಪ್ರಕರಣ ದಾಖಲು – vishwanews24

ಇನ್ನು ಗಂಡಸರು ಮತ್ತು ಗಂಡು ಮಕ್ಕಳು ಶಲ್ಯ, ಪ್ಯಾಂಟ್, ಪಂಚೆ ಧರಿಸಿ ಬರಬೇಕು. ಹೆಂಗಸರು ಮತ್ತು ಹೆಣ್ಣು ಮಕ್ಕಳು ಸೀರೆ ಮತ್ತು ಚೂಡಿದಾರ್ ಗಳಂತಹ ಸಂಪ್ರದಾಯಿಕ ಉಡುಪು ಧರಿಸಿ ಬಂದರೆ ಮಾತ್ರ ದೇವಸ್ಥಾನ ಒಳಗೆ ಪುವೇಶಿಸಲು ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply