ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಜನವರಿಯಲ್ಲೇ ಕೆ.ಆರ್ ಪುರದ ಟಿನ್ ಫ್ಯಾಕ್ಟರಿ ಬಳಿಯಿದ್ದ ನಿರ್ವಣ ಇಂಟರ್ನ್ಯಾಷನಲ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಥೈಲ್ಯಾಂಡ್ ಮಹಿಳೆಯರು ಸೇರಿದಂತೆ 44 ಮಹಿಳೆಯರನ್ನ ರಕ್ಷಣೆ ಮಾಡಲಾಗಿತ್ತು. ದಾಳಿ ಬಳಿಕ ಸ್ಪಾ ಅನ್ನು ಬಂದ್ ಮಾಡಲಾಗಿತ್ತು.
ಇನ್ನೂ ಆರೋಪಿಯು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಿಂದ ಯುವತಿಯರನ್ನ ಕರೆಸುತ್ತಿದ್ದ. ಬೆಂಗಳೂರಿನಲ್ಲಿ ಕೆಲಸಕ್ಕೆಂದು ಕರೆಸಿ ಬಂದು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಅನಿಲ್ ರೆಡ್ಡಿ ವಿರುದ್ಧ ರೇಪ್ ಸೇರಿ ಇತರೇ ಪ್ರಕರಣಗಳು ದಾಖಲಾಗಿದ್ದರಿಂದ, ಮಹದೇವಪುರ ಪೊಲೀಸರು ಗೂಂಡಾ ಕಾಯ್ದೆ ರಿಪೋರ್ಟ್ ತಯಾರಿಸಿದ್ದರು. ವರದಿ ಆಧರಿಸಿ ಪೊಲೀಸ್ ಆಯುಕ್ತರು ಅನಿಲ್ ರೆಡ್ಡಿ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಪೊಲೀಸರು ಕಂಪ್ಲೀಟ್ ಮಾಹಿತಿ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…