Featured

ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಮಾಹಿತಿ ಸಂಗ್ರಹ ಕಡ್ಡಾಯ : ಉಡುಪಿ ಎಸ್ಪಿ – Vishwanews24

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ಬಗ್ಗೆ ವಿಚಾರಣೆಗೆ ಮಂಗಳೂರು ಪೊಲೀಸರು ಉಡುಪಿಗೆ ಬಂದಿದ್ದರು : ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ

ಉಡುಪಿ: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ಉಡುಪಿಗೆ ಬಂದ ಬಗ್ಗೆ ತನಿಖೆ ವೇಳೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಉಡುಪಿಗೆ ಬಂದು ವಿಚಾರಣೆ ನಡೆಸಿದ್ದರು ಎಂದರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಹೇಳಿದ್ದಾರೆ.

ಶಂಕಿತ ಉಗ್ರ ಶಾರಿಕ್ ಉಡುಪಿ ಕೃಷ್ಣ ಮಠ ಪರಿಸರದಲ್ಲಿ ಸಂಚರಿಸಿರುವ ವಿಚಾರದ ಕುರಿತಂತೆ ಹೇಳಿಕೆ ನೀಡಿರುವ ಅವರು, ಉಡುಪಿ ಪೊಲೀಸರು ಈ ಪ್ರಕರಣದ ತನಿಖಾಧಿಕಾರಿಗಳಲ್ಲ. ಮಂಗಳೂರು ಪೊಲೀಸರೇ ತನಿಖೆ ನಡೆಸಿ ಹೋಗಿದ್ದಾರೆ. ಅವರೇ ಈ ವಿಚಾರದ ಕುರಿತು ಮಾಹಿತಿ ನೀಡುತ್ತಾರೆ ಎಂದರು.

ಕಾರ್ಮಿಕರಾಗಿ ಜಿಲ್ಲೆಗೆ ಬರುವವರ ದಾಖಲೆ ಸತ್ಯಾಸತ್ಯತೆ ಪರಿಶೀಲನೆ ವಿಚಾರವಾಗಿ ಮಾತನಾಡಿದ ಅವರು, ಉಡುಪಿಯ ಮಲ್ಪೆ ಭಾಗಕ್ಕೆ ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಇನ್ನು ಮೀನುಗಾರಿಕಾ ಬೋಟುಗಳಲ್ಲಿ ಮತ್ತು ಮೀನು ಫ್ಯಾಕ್ಟರಿಗಳಲ್ಲಿ ಕೆಲಸ ಮಾಡಲು ಹೊರ ರಾಜ್ಯದ ಕಾರ್ಮಿಕರು ಹೆಚ್ಚಾಗಿ ಬರುತ್ತಾರೆ. ಬಲೆ ನೇಯುವ ಕಾರ್ಖಾನೆ, ಐಸ್ ಫ್ಯಾಕ್ಟರಿಗಳಲ್ಲಿಯೂ ದುಡಿಯುವವರಿದ್ದಾರೆ. ಈ ಹಿನ್ನೆಲೆಯಲ್ಲಿ ಮೀನುಗಾರ ಸಂಘಟನೆಗಳೊಂದಿಗೆ ಈಗಾಗಲೇ ಮಾತನಾಡಲಾಗಿದ್ದು, ಹೊರ ರಾಜ್ಯಗಳಿಂದ ಬರುವ ಕಾರ್ಮಿಕರ ಎಲ್ಲಾ ವಿವರ ಸಂಗ್ರಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಬಂದರೂ ಮಾಹಿತಿ ಸಂಗ್ರಹ ಕಡ್ಡಾಯ. ಆಯಕಟ್ಟಿನ ಸ್ಥಳಗಳಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.ಮೀನುಗಾರ ಮುಖಂಡರಿಂದಲೂ ಮಾಹಿತಿ ಸಂಗ್ರಹಿಸುತ್ತೇವೆ. ತಂತ್ರಜ್ಞಾನ ಆಧಾರಿತ ನಿರ್ವಹಣೆ ಮಾಡುತ್ತೇವೆ ಎಂದರು.

ಮಂಗಳೂರು ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಹತ್ತು ಹಲವಾರು ದೇವಸ್ಥಾನಗಳ ಭದ್ರತೆಯ ಬಗ್ಗೆ ಚರ್ಚಿಸಿದ್ದೇವೆ. ದೇವಸ್ಥಾನಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಮಾಡುತ್ತೇವೆ.ನಿಯಮಿತವಾಗಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಮುಜರಾಯಿ ದೇವಸ್ಥಾನಗಳಿಗೆ ಹೊರತಾಗಿ ಭಕ್ತರು ಹೆಚ್ಚು ಬರುವ ದೇವಸ್ಥಾನಗಳ ಬಗ್ಗೆ ನಿಗಾ ಇರಿಸುತ್ತೇವೆ. ಪಬ್ಲಿಕ್ ಸೇಫ್ಟಿ ಆಕ್ಟ್ ಅನುಸಾರ ನಿರ್ದೇಶನ ನೀಡುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ವಿವರಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago