ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು.
ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು.
ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್‌ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…