ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ.
ವಿಶೇಷ ಆಹ್ವಾನಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಶಕ್ತಿನಗರ ನಾಲ್ಯಪದವು ಕುವೆಂಪು ಕೇಂದ್ರೀಯ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ ಅದೇ ಶಾಲೆಯ ಶಿಕ್ಷಕಿ ಶ್ವೇತಾ ಕೆ ಅವರಿಗೆ ಆಮಂತ್ರಣ ದೊರಕಿದೆ.
ಅದೇ ರೀತಿ, ಕರ್ನಾಟಕದ ಪಂಚಾಯತ್ಗಳ ಆರು ಮಹಿಳಾ ಅಧ್ಯಕ್ಷರನ್ನು ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಅವರಲ್ಲಿ ಒಬ್ಬರು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ.
ಪೂರ್ವಿ ಯು. ಅವರು ಶಕ್ತಿನಗರದ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಉಮೇಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಪುತ್ರಿ. ಪಠ್ಯಕ್ರಮ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತೆಯಾಗಿರುವ ಈಕೆಯನ್ನು ಆಯ್ಕೆ ಮಾಡಲಾಗಿದೆ.
ಕಲಬುರಗಿ, ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಶಿಕ್ಷಣ ವಿಭಾಗದಿಂದ ಒಟ್ಟು ಎಂಟು ಮಂದಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…