Featured

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ – vishwanews24

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ

ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ.

ವಿಶೇಷ ಆಹ್ವಾನಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಶಕ್ತಿನಗರ ನಾಲ್ಯಪದವು ಕುವೆಂಪು ಕೇಂದ್ರೀಯ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ ಅದೇ ಶಾಲೆಯ ಶಿಕ್ಷಕಿ ಶ್ವೇತಾ ಕೆ ಅವರಿಗೆ ಆಮಂತ್ರಣ ದೊರಕಿದೆ.

ಅದೇ ರೀತಿ, ಕರ್ನಾಟಕದ ಪಂಚಾಯತ್‌ಗಳ ಆರು ಮಹಿಳಾ ಅಧ್ಯಕ್ಷರನ್ನು ಸ್ವಾತಂತ್ರ‍್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಅವರಲ್ಲಿ ಒಬ್ಬರು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ.

ಪೂರ್ವಿ ಯು. ಅವರು ಶಕ್ತಿನಗರದ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಉಮೇಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಪುತ್ರಿ. ಪಠ್ಯಕ್ರಮ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತೆಯಾಗಿರುವ ಈಕೆಯನ್ನು ಆಯ್ಕೆ ಮಾಡಲಾಗಿದೆ.

ಕಲಬುರಗಿ, ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಶಿಕ್ಷಣ ವಿಭಾಗದಿಂದ ಒಟ್ಟು ಎಂಟು ಮಂದಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

14 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

27 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago