Categories: ಉಡುಪಿ

ಹೊಸದಿಲ್ಲಿ: ಸ್ವಂತ ಹಣದಿಂದ ಬಡವರಿಗಾಗಿ 1 ರೂ.ಗೆ ಊಟದ ಕ್ಯಾಂಟಿನ್‌ ತೆರೆದ  ಗೌತಮ್ ಗಂಭೀರ್‌ -Vishwanews24

ಹೊಸದಿಲ್ಲಿ: ಸ್ವಂತ ಹಣದಿಂದ ಬಡವರಿಗಾಗಿ 1 ರೂ.ಗೆ ಊಟದ ಕ್ಯಾಂಟಿನ್‌ ತೆರೆದ  ಗೌತಮ್ ಗಂಭೀರ್‌ -Vishwanews24

ಹೊಸದಿಲ್ಲಿ: ಬಿಜೆಪಿ ಸಂಸದ ಗೌತಮ್‌ ಗಂಭೀರ ವಿನೂತನ ಕ್ಯಾಂಟೀನ್‌ವೊಂದನ್ನು ತಮ್ಮ ಹಣದಿಂದಲೇ ತೆರೆದಿದ್ದು, ಈ ಹೋಟೆಲ್‌ನಲ್ಲಿ ಒಂದು ರೂಪಾಯಿಗೆ ಊಟ ಸಿಗುತ್ತಿದೆ.

ಜನ ರಸೋಯಿ ಎಂಬ ಹೆಸರಿನ ಕ್ಯಾಂಟೀನ್‌ವೊಂದನ್ನು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಆರಂಭಿಸಿದ್ದು, ಬಡವರಿಗೆ ಎರಡು ಹೊತ್ತು ಊಟ ಸಿಗಬೇಕು ಎನ್ನುವ ಉದ್ದೇಶದಿಂದ ಈ ಕ್ಯಾಂಟೀನ್‌ ಆರಂಭಿಸಿರುವುದಾಗಿ ಗಂಭೀರ್‌ ಮಾಹಿತಿ ನೀಡಿದ್ದಾರೆ. ಕಡು ಬಡವರು ದಿನಕ್ಕೆ ಎರಡು ಹೊತ್ತಿನ ಊಟಕ್ಕೂ ಪರದಾಡುವುದನ್ನು ನೋಡಿ ನಾನು ಬೇಸರಗೊಂಡಿದ್ದೆ. ಇದಕ್ಕಾಗಿ ಗಾಂಧಿನಗರದಲ್ಲಿ ಸುಸಜ್ಜಿತವಾದ ‘ಜನ್ ರಸೋಯಿ’ ಆಧುನಿಕ ಕ್ಯಾಂಟೀನ್ ಆರಂಭಿಸಲಾಗಿದೆ.

ಅಗತ್ಯವಿರುವವರು ಇಲ್ಲಿಗೆ ಬಂದು 1 ರೂಪಾಯಿ ನೀಡಿ ಊಟ ಮಾಡಬಹುದು’ ಎಂದು ಗಂಭೀರ್ ತಿಳಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವದ ದಿನ ದಿಲ್ಲಿಯ ಅಶೋಕನಗರದಲ್ಲಿ ಮತ್ತೊಂದು ಕ್ಯಾಂಟೀನ್‌ ಆರಂಭಿಸುವುದಾಗಿಯೂ ಗೌತಮ್ ಗಂಭೀರ್‌ ತಿಳಿಸಿದ್ದಾರೆ. ಜಾತಿ, ಮತ, ಧರ್ಮ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬರಿಗೂ ಆರೋಗ್ಯಕರ ಮತ್ತು ಶುಚಿತ್ವವಿರುವ ಆಹಾರ ಸಿಗಬೇಕು ಎಂದು ನಾನು ಭಾವಿಸುತ್ತೇನೆ.

ದಿಲ್ಲಿಯ ಪ್ರತಿಯೊಬ್ಬ ವ್ಯಕ್ತಿಗೆ ಆರೋಗ್ಯಕರ ಆಹಾರ ಮತ್ತು ಶುದ್ಧ ನೀರನ್ನು ಪಡೆಯುವ ನನ್ನ ಕನಸು ನನಸಾಗುವ ವರೆಗೆ ನಾನು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ. ಪೂರ್ವ ದಿಲ್ಲಿಯ ಗಾಂಧಿನಗರದಲ್ಲಿ ಈ ಕ್ಯಾಂಟೀನ್‌ ಇದ್ದು, ಸಂಪೂರ್ಣ ಅಭಿವೃದ್ಧಿ ಹೊಂದಿದ ಖಾಸಗಿ ಕ್ಯಾಂಟೀನ್ ಇದಾಗಿದೆ. ಇತರೆ ಹೋಟೆಲ್‌ಗಿಂತಲೂ ಕಮ್ಮಿ ಇಲ್ಲವೆಂಬಂತೆ ನಿರ್ಮಾಣಗೊಂಡಿದೆ. ಈ ಕ್ಯಾಂಟೀನ್‌ನ ಸಂಪೂರ್ಣ ವೆಚ್ಚವನ್ನು ಗೌತಮ್‌ ಗಂಭೀರ್‌ ನೋಡಿಕೊಳ್ಳುತ್ತಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago