ಬೆಂಗಳೂರು: ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.
ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರ, ಜಾತಿ ಮತ್ತು ಉಪಜಾತಿಗಳ ನಡುವೆ ಎತ್ತಿ ಕಟ್ಟುತ್ತಿದೆ. ಹೀಗಾಗಿ ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.
15 ದಿನಗಳಲ್ಲಿ ಸರ್ಕಾರ ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿ ಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾಗ ಗಣತಿ ಸರಿಯಲ್ಲ, ಸರ್ಕಾರ 1500 ಉಪಜಾತಿಗಳಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಜಾತಿಗಣತಿ ಆರಂಭವಾಗುತ್ತಿದೆ. ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ಕೈಪಿಡಿ ಪಟ್ಟಿಯಲ್ಲಿರುವ ಕೆಲ ಜಾತಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಏಕೆಂದರೆ ಸರ್ಕಾರ ರಾಜ್ಯದಲ್ಲಿ ಗುರುತಿಸಿರುವ ಜಾತಿ ಮತ್ತು ಉಪಜಾತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಕೆಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಅಂತಾ ನಮೂದಿಸಲಾಗಿದೆ.
ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ನೇಕಾರ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ಅಷ್ಟೇ ಯಾಕೆ ಒಕ್ಕಲಿಗ ಕ್ರಿಶ್ಚಿಯನ್, ವಿಶ್ವಕರ್ಮ ಬ್ರಾಹ್ಮಣ ಕ್ರಿಶ್ಚಿಯನ್ ಅಂತಾ ಉಲ್ಲೇಖವಿದೆ. ಈ ಪಟ್ಟಿಯೇ ಈಗ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂಗಳ ಜಾತಿಗಳ ನಡುವೆ ಕ್ರಿಶ್ಚಿಯನ್ ನುಗ್ಗಿಸುವ ಹುನ್ನಾರ’ ಹೆಸರಿನಡಿ, ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಹೋರಾಟಕ್ಕೆ ಕರೆ ನೀಡಿವೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಮುಂದಾಗಿವೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ನಾವು ಕಾಲಂ ಕೊಟ್ಟಿದ್ದೇವೆ. ಅವರು ಏನ್ ಬರಿತಾರೋ ಬರೆಯಲಿ ಎಂದಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…