Featured

ಹೊಸ ಕೃಷಿ ಕಾನೂನು : ಸರಕಾರ ಆಹ್ವಾನಿಸಿದರೆ ಮಾತುಕತೆಗೆ ಸಿದ್ಧ, ಆದರೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ರಾಕೇಶ್ ಟಿಕಾಯತ್ -Vishwanews24

ಹೊಸ ಕೃಷಿ ಕಾನೂನು : ಸರಕಾರ ಆಹ್ವಾನಿಸಿದರೆ ಮಾತುಕತೆಗೆ ಸಿದ್ಧ, ಆದರೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ರಾಕೇಶ್ ಟಿಕಾಯತ್ -Vishwanews24

ಹೊಸದಿಲ್ಲಿ: ಮೂರು ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಸರಕಾರ ಮಾತುಕತೆಗೆ ಆಹ್ವಾನಿಸಿದರೆ ಮಾತುಕತೆಗೆ ಸಿದ್ದರಾಗಿದ್ದಾರೆ. ಜನವರಿ 22ರಂದು ಕೊನೆಗೊಂಡಿದ್ದ ಮಾತುಕತೆ ಪುನರಾರಂಭಿಸಲು ಸಿದ್ಧ. ಆದರೆ ನಮ್ಮ ಬೇಡಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ರವಿವಾರ ಹೇಳಿದ್ದಾರೆ.

ಮಾತುಕತೆ ಪುನರಾರಂಭಿಸಲು 2020ರ ನವೆಂಬರ್ ರಿಂದ ದಿಲ್ಲಿಯ ಮೂರು ಗಡಿಭಾಗಗಳಾದ ಸಿಂಘು, ಟಿಕ್ರಿ ಹಾಗೂ ಘಾಝಿಪುರ್ ನಲ್ಲಿ ಬೀಡುಬಿಟ್ಟಿರುವ ಪ್ರತಿಭಟನಕಾರರನ್ನು ಪ್ರತಿನಿದಿಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‍ಕೆಎಂ)ವನ್ನು ಸರಕಾರವು ಮಾತುಕತೆಗೆ ಆಹ್ವಾನಿಸಬೇಕು ಎಂದು ಅವರು ಹೇಳಿದರು.

ಜನರು ತಾವೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್ -Vishwanews24

ಸರಕಾರದೊಂದಿಗಿನ ಮಾತುಕತೆ ಜನವರಿ 22ರಂದು ಕೊನೆಗೊಂಡ ಸ್ಥಳದಿಂದ ಆರಂಭವಾಗುತ್ತದೆ. ಎಲ್ಲಾ ಮೂರು ಕಪ್ಪು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು.ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ನೀಡಬೇಕೆಂಬ ಬೇಡಿಕೆಯಲ್ಲಿ ಬದಲಾವಣೆ ಇಲ್ಲ ಎಂದು ಟಿಕಾಯತ್ ಹೇಳಿಕೆಯನ್ನು ಉಲ್ಲೇಖಿಸಿ ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.

ಕೊರೋನ ವೈರಸ್ ಹೆಚ್ಚುತ್ತಿರುವ ಮಧ್ಯೆ ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬಿಕೆಯು ರಾಷ್ಟ್ರೀಯ ವಕ್ತಾರರು ಈ ಹೇಳಿಕೆ ನೀಡಿದ್ದಾರೆ.

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago