Featured

ಹೊಸ ಟ್ರಾಫಿಕ್ ರೂಲ್ಸ್ : ಸೆಪ್ಟೆಂಬರ್ 1ರಿಂದ ನಿಯಮಗಳು ಜಾರಿಗೆ -Vishwanews24

ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ದಾಖಲೆ ಪ್ರಕಾರ ದೇಶದಲ್ಲಿ ವರ್ಷಕ್ಕೆ ಸುಮಾರು 5 ಲಕ್ಷ ಅಪಘಾತಗಳು ನಡೆಯುತ್ತಿವೆ. ಈ ರೀತಿಯ ರಸ್ತೆ ಅಪಘಾತದಲ್ಲಿ ಒಂದೂವರೆ ಲಕ್ಷ ಜನ ಸಾವನ್ನಪ್ಪಿದ್ದಾರೆ. ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದೆ.

ಇನ್ನೂ ಕೆಲವು ನಿಯಮಗಳು ಡಿಸೆಂಬರ್ 1ರಿಂದ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೀಗಾಗಿ, ವಾಹನ ದಾಖಲೆ ಇಲ್ಲದಿದ್ದರೆ ಸರಿಮಾಡಿಸಿ. ಡ್ರೈವಿಂಗ್ ಲೈಸೆನ್ಸ್​ ಮತ್ತು ಇನ್ಷುರೆನ್ಸ್​ ಇಲ್ಲವಾದರೆ ಆದಷ್ಟು ಬೇಗ ಮಾಡಿಸಿಕೊಳ್ಳುವುದು ಉತ್ತಮ. ಮುಂದಿನ ತಿಂಗಳ 1ರಿಂದ ಟ್ರಾಫಿಕ್ ನಿಯಮಗಳನ್ನು ಬ್ರೇಕ್ ಮಾಡಿದರೆ ದುಪ್ಪಟ್ಟು ದಂಡ ತೆರಬೇಕಾಗುತ್ತದೆ.

ಜಾಹಿರಾತು

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡಿದರೆ, ವಾಹನ ಚಾಲನೆ ವೇಳೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಮತ್ತು ಅಪಘಾತ ಮಾಡಿದರೆ ಅದಕ್ಕೆ ಆ ಮಕ್ಕಳ ಪೋಷಕರು ಅಥವಾ ಆ ವಾಹನದ ಮಾಲಿಕರೇ ಹೊಣೆಯಾಗುತ್ತಾರೆ. ಆ ವಾಹನದ ನೋಂದಣಿಯನ್ನು 1 ವರ್ಷದವರೆಗೆ ಅಮಾನತಿನಲ್ಲಿ ಇಡಲಾಗುತ್ತದೆ.

ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಡ್ರೈವಿಂಗ್ ಲೈಸೆನ್ಸ್ ಅನರ್ಹಗೊಳಿಸಲಾಗುತ್ತದೆ.

ವಿವರ ಹಳೆಯ ದಂಡ (ರೂ.) ಹೊಸ ದಂಡ (ರೂ.)
ಲೈಸೆನ್ಸ್ ಇಲ್ಲದ ವಾಹನ ಚಾಲನೆ 500 5,000
ಲೈಸೆನ್ಸ್​ ತಿರಸ್ಕೃತಗೊಂಡಿದ್ದರೂ ಚಾಲನೆ 500 10,000
ವೇಗದ ಚಾಲನೆ 400 1,000 (ಲಘು ವಾಹನ)

2000 (ಮಧ್ಯಮ ಪ್ರಯಾಣಿಕರ ವಾಹನ)

ಮದ್ಯಸೇವಿಸಿ ಚಾಲನೆ 2,000 10,000
ಹೆಲ್ಮೆಟ್​ ಧರಿಸದಿದ್ದರೆ 100 1,000, 3 ತಿಂಗಳ ಲೈಸೆನ್ಸ್​ ರದ್ದು
ಸೀಟ್ ಬೆಲ್ಟ್​ ಹಾಕದಿರುವುದು 100 1,000
ನಿಗದಿಗಿಂತ ಹೆಚ್ಚು ಜನರನ್ನು ಕರೆದೊಯ್ಯುವುದು 1,000
ತುರ್ತುಸೇವೆ ವಾಹನಗಳಿಗೆ ದಾರಿ ಬಿಡದಿರುವುದು 10,000
ಇನ್ಷುರೆನ್ಸ್​ ಇಲ್ಲದೆ ವಾಹನ ಚಾಲನೆ 1,000 2,000
ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನರನ್ನು ಕರೆದೊಯ್ಯುವುದು 100 2,000, 3 ತಿಂಗಳವರೆಗೆ ಲೈಸೆನ್ಸ್​ ರದ್ದು
Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago