Featured

ಹೊಸ ಭೂಸುಧಾರಣೆ ಕಾಯ್ದೆ : ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ : ಹೆಚ್. ಡಿ.ಕುಮಾರಸ್ವಾಮಿ -Vishwanews24

ಹೊಸ ಭೂಸುಧಾರಣೆ ಕಾಯ್ದೆ : ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ : ಹೆಚ್. ಡಿ.ಕುಮಾರಸ್ವಾಮಿ -Vishwanews24

ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ?? ಪ್ರತಿಭಟನಾಕಾರರಿಗೆ HDK ಪ್ರಶ್ನೆ

ಬೆಂಗಳೂರು : ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಸುಧಾರಣೆ ಕಾಯ್ದೆ ರೈತರಿಗೆ ಮಾರಕವಾಗುವಮತೆ ಅಂಶವಿಲ್ಲ, ಈಗ ಇದರಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ಈ ಕಾಯ್ದೆಯಿಂದ ದೊಡ್ಡ ಮಟ್ಟದ ಅಪಾಯವಿಲ್ಲ ಎಂದು ಹೇಳಿದ್ದಾರೆ.

ಭೂಸುಧಾರಣೆ ಕಾಯ್ದೆಗೆ ನಾನು, ಹೆಚ್.ಡಿ. ದೇವೇಗೌಡರು ಮೊದಲು ವಿರೋಧಿಸಿದ್ದೆವು.ಇದೀಗ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ರೈತರಿಗೆ ಭೂಸುಧಾರಣೆ ಕಾಯ್ದೆ ಬಗ್ಗೆ ಮಾಹಿತಿಯ ಕೊರತೆ ಇದೆ. ರೈತರ ಹೋರಾಟದಿಂದ ಸಮಾಜಕ್ಕೆ ಹಾನಿಯಾಗಬಾರದು ಎಂದು ಹೇಳಿದ್ದಾರೆ.

ಹೊಸ ಭೂ ಸುಧಾರಣಾ ಕಾಯ್ದೆಯಲ್ಲಿ ಮಾರಕವಾದ ಅಂಶಗಳು ಯಾವುದು ಯಾಕಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರತಿಭಟನಾನಿರತರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಿಜವಾಗಿಯೂ ಭೂ ಸುಧಾರಣೆಯಲ್ಲಿ ಯಾವೆಲ್ಲಾ ಬದಲಾವಣೆ ತರಲಾಗಿದೆ ಎಂಬುದನ್ನು ಪ್ರತಿಭಟನಾಕಾರರಿಗೆ ಅವಲೋಕಿಸುವಷ್ಟು ತಾಳ್ಮೆ ಇಲ್ಲ ಮೊದಲಿದ್ದ ಕಾಯ್ದೆಗೂ ಈಗಿರುವ ಕಾಯ್ದೆಗೂ ಬಹಳಷ್ಟು ಬದಲಾವಣೆ ತರಲಾಗಿದೆ ಹಾಗಾಗಿ ಪ್ರತಿಭಟನಾಕಾರರು ಮೊದಲು ಬದಲಾವಣೆಗೊಳಿಸಿದ ಭೂ ಸುಧಾರಣಾ ಕಾಯ್ದೆಯನ್ನು ಪರಿಶೀಲಿಸಿ ಬಳಿಕ ಪ್ರತಿಭಟನೆ ನಡೆಸಲಿ ಎಂದು ಹೇಳಿದ್ದಾರೆ.

ರೈತರ ಕಾಯಿದೆ ಬಗ್ಗೆ ಬಿಜೆಪಿಯ ಪರವಾಗಿ ಜೆಡಿಎಸ್ ಒಲವು ತೋರಿಸುತ್ತಿದೆ ಎಂಬ ಕಾಂಗ್ರೆಸ್ ಹಾಗೂ ರೈತ ಮುಖಂಡರ ಹೇಳಿಕೆಗೆ ಸಮರ್ಥನೆಯನ್ನು ನೀಡಿದ ಹೆಚ್ ಡಿಕೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ.

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

8 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

8 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

16 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

17 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

17 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago