Featured

ಹೊಸ ಮೋಟಾರು ವಾಹನ ಕಾಯ್ದೆ : ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶ : ನಿತಿನ್ ಗಡ್ಕರಿ -Vishwanews24

ನವದೆಹಲಿ: ಜನರ ಮೇಲೆ ದುಬಾರಿ ದಂಡ ವಿಧಿಸುವುದು ಸರ್ಕಾರದ ಉದ್ದೇಶವಲ್ಲಾ, ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶವಾಗಿದೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ  ಎಂದಿದ್ದಾರೆ.

ಭಾನುವಾರದಿಂದ ನೂತನ ಸಂಚಾರಿ ನಿಯಮ ಜಾರಿಗೆ ಬಂದ ನಂತರ ಸಂಚಾರಿ ನಿಯಮ ಉಲ್ಲಂಘನೆಗಾಗಿ ಗುರುಗ್ರಾಮ್ ನಲ್ಲಿ ಬೈಕ್ ಸವಾರನೊಬ್ಬನಿಗೆ 23 ಸಾವಿರ ದಂಡ ವಿಧಿಸಲಾಗಿದೆ. ಟ್ರಕ್ ಡ್ರೈವರ್ ಗೆ 59 ಸಾವಿರದ ಚಲನ್ ನೀಡಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನಿತಿನ್ ಗಡ್ಕರಿ, ಸರ್ಕಾರ ಸುಖಾಸುಮ್ಮನೆ ಜನರ ಮೇಲೆ ದಂಡ ಹಾಕುವುದಿಲ್ಲ. ಯಾರೊಬ್ಬರು ಅಂತಹ ದಂಡ ಪಾವತಿಸದಂತಹ ದಿನ ಬರಬೇಕಾಗಿದೆ ಎಂದರು.

ಕುಡಿದು ವಾಹನ ಚಾಲನೆ ಮಾಡುವ ಆಟೋ ಡ್ರೈವರ್ ಉಲ್ಲೇಖಿಸಿ ಮಾತನಾಡಿದ ನಿತಿನ್ ಗಡ್ಕರಿ, ಅಪಘಾತ ಸಂಭವಿಸಿದರೆ ಯಾರು ಜವಾಬ್ದಾರಿ ಹೊರುತ್ತಾರೆ ಎಂದು ಪ್ರಶ್ನಿಸಿದರು.

ನೂತನ ಕಾಯ್ದೆ ಅನುಷ್ಠಾನಕ್ಕೆ ಪಶ್ಚಿಮ ಬಂಗಾಳ ಹಾಗೂ ಮಧ್ಯಪ್ರದೇಶ ರಾಜ್ಯಗಳು ನಿರಾಕರಿಸಿವೆ. ಈ ವಿಚಾರ ಸಮವರ್ತಿ ಪಟ್ಟಿಯಲ್ಲಿ ಬರಲಿದ್ದು, ಏಳು ರಾಜಕೀಯ ಪಕ್ಷಗಳ ರಾಜ್ಯ ಸಾರಿಗೆ ಸಚಿವರನ್ನೊಳಗೊಂಡ ಸಮಿತಿಯ ಶಿಫಾರಸ್ಸಿನ ನಂತರ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಸಂಸತ್ತಿನ ಸ್ಥಾಯಿ ಸಮಿತಿಯೂ ಕೂಡಾ ಸಲಹೆಗಳನ್ನು ನೀಡಿದ್ದು, ನಂತರವಷ್ಟೇ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

ದೇಶದಲ್ಲಿ  ಪ್ರತಿವರ್ಷ  5 ಲಕ್ಷ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇವರ ಜೀವವನ್ನು ಕಾಪಾಡಲಿಲ್ಲವೆಂದರೆ ದೇಶದ ಕಾನೂನಿಗೆ ಗೌರವ ಕೊಟ್ಟಂತೆ ಆಗುವುದಿಲ್ಲ ಅಂತೆಯೇ ಭಯ ಕೂಡಾ ಇರುವುದಿಲ್ಲ ಇದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗಾಗಿ ಕಠಿಣ ದಂಡವನ್ನು ವಿಧಿಸುವುದು ಅಗತ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡರು.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago