ನವದೆಹಲಿ: ಜನರ ಮೇಲೆ ದುಬಾರಿ ದಂಡ ವಿಧಿಸುವುದು ಸರ್ಕಾರದ ಉದ್ದೇಶವಲ್ಲಾ, ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶವಾಗಿದೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ ಎಂದಿದ್ದಾರೆ.
ಭಾನುವಾರದಿಂದ ನೂತನ ಸಂಚಾರಿ ನಿಯಮ ಜಾರಿಗೆ ಬಂದ ನಂತರ ಸಂಚಾರಿ ನಿಯಮ ಉಲ್ಲಂಘನೆಗಾಗಿ ಗುರುಗ್ರಾಮ್ ನಲ್ಲಿ ಬೈಕ್ ಸವಾರನೊಬ್ಬನಿಗೆ 23 ಸಾವಿರ ದಂಡ ವಿಧಿಸಲಾಗಿದೆ. ಟ್ರಕ್ ಡ್ರೈವರ್ ಗೆ 59 ಸಾವಿರದ ಚಲನ್ ನೀಡಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನಿತಿನ್ ಗಡ್ಕರಿ, ಸರ್ಕಾರ ಸುಖಾಸುಮ್ಮನೆ ಜನರ ಮೇಲೆ ದಂಡ ಹಾಕುವುದಿಲ್ಲ. ಯಾರೊಬ್ಬರು ಅಂತಹ ದಂಡ ಪಾವತಿಸದಂತಹ ದಿನ ಬರಬೇಕಾಗಿದೆ ಎಂದರು.
ಕುಡಿದು ವಾಹನ ಚಾಲನೆ ಮಾಡುವ ಆಟೋ ಡ್ರೈವರ್ ಉಲ್ಲೇಖಿಸಿ ಮಾತನಾಡಿದ ನಿತಿನ್ ಗಡ್ಕರಿ, ಅಪಘಾತ ಸಂಭವಿಸಿದರೆ ಯಾರು ಜವಾಬ್ದಾರಿ ಹೊರುತ್ತಾರೆ ಎಂದು ಪ್ರಶ್ನಿಸಿದರು.
ನೂತನ ಕಾಯ್ದೆ ಅನುಷ್ಠಾನಕ್ಕೆ ಪಶ್ಚಿಮ ಬಂಗಾಳ ಹಾಗೂ ಮಧ್ಯಪ್ರದೇಶ ರಾಜ್ಯಗಳು ನಿರಾಕರಿಸಿವೆ. ಈ ವಿಚಾರ ಸಮವರ್ತಿ ಪಟ್ಟಿಯಲ್ಲಿ ಬರಲಿದ್ದು, ಏಳು ರಾಜಕೀಯ ಪಕ್ಷಗಳ ರಾಜ್ಯ ಸಾರಿಗೆ ಸಚಿವರನ್ನೊಳಗೊಂಡ ಸಮಿತಿಯ ಶಿಫಾರಸ್ಸಿನ ನಂತರ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಸತ್ತಿನ ಸ್ಥಾಯಿ ಸಮಿತಿಯೂ ಕೂಡಾ ಸಲಹೆಗಳನ್ನು ನೀಡಿದ್ದು, ನಂತರವಷ್ಟೇ ನೂತನ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು.
ದೇಶದಲ್ಲಿ ಪ್ರತಿವರ್ಷ 5 ಲಕ್ಷ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇವರ ಜೀವವನ್ನು ಕಾಪಾಡಲಿಲ್ಲವೆಂದರೆ ದೇಶದ ಕಾನೂನಿಗೆ ಗೌರವ ಕೊಟ್ಟಂತೆ ಆಗುವುದಿಲ್ಲ ಅಂತೆಯೇ ಭಯ ಕೂಡಾ ಇರುವುದಿಲ್ಲ ಇದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗಾಗಿ ಕಠಿಣ ದಂಡವನ್ನು ವಿಧಿಸುವುದು ಅಗತ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…