Featured

ಹೊಸ `ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಿರುವಂತ ದಾಖಲೆಗಳು ಯಾವುದು – ಇಲ್ಲಿದೆ ಸಂಪೂರ್ಣ ಮಾಹಿತಿ – Vishwanews24

ಹೊಸ `ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಿರುವಂತ ದಾಖಲೆಗಳು ಯಾವುದು – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ .
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

 

Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

7 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago