Featured

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ – vishwanews24

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಶಾಕ್ : ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು: ಹೊಸ ವರ್ಷದ  ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ.

ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ.

ಎಷ್ಟು ದುಬಾರಿ?

ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಹಾಲಿ ಓಟಿ 180 ಎಂಎಲ್‌ಗೆ 100 ರೂಪಾಯಿ ಇದ್ದು, ಜ.1 ರಿಂದ ಓಟಿ ಬೆಲೆ 123 ರೂ.ಗೆ ಏರಿಕೆಯಾಗಲಿದೆ. ಬಿಪಿ ದರ ಹಾಲಿ 123 ರೂ. ಇದ್ದು ಜನವರಿಯಿಂದ 159 ರೂ. ಆಗಲಿದೆ. 8ಪಿಎಂ ದರ ಹಾಲಿ 100 ರೂ. ಇದ್ದು 123 ರೂ.ಗೆ ಏರಲಿದೆ.

ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್  ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.

ಈ ಸಂಬಂಧ ಬಾರ್ ಮಾಲೀಕರಿಗೆ ಅಂದರೆ ಎಂಆರ್‌ಪಿ ಬಾರ್ ಮಾಲೀಕರಿಗೆ ಮೆಸೇಜ್ ಮೂಲಕ ಕಂಪನಿಗಳು ಮಾಹಿತಿ ರವಾನೆ ಮಾಡಿದ್ದು, ಸೂಚನೆಯಂತೆ ದರ ನಿಗದಿಯಂತೆ ಸಹಕರಿಸುವಂತೆ ಮನವಿ ಮಾಡಿವೆ.

ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35,000 ಕೋಟಿ ರೂ. ಗುರಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

17 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago