Featured

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ – vishwanews24

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.

ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.

POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ ಖಗೋಳವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago