Featured

ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ, ಆದರೆ ಕೋವಿಡ್-19 ನಿಯಮ ಪಾಲಿಸಲಿ : ಮುಖ್ಯಮಂತ್ರಿ – VIshwanewss24

ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ, ಆದರೆ ಕೋವಿಡ್-19 ನಿಯಮ ಪಾಲಿಸಲಿ : ಮುಖ್ಯಮಂತ್ರಿ – VIshwanewss24

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್-19 ನಿಯಮ ಪಾಲಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸ ವರ್ಷಕ್ಕೆ ಇನ್ನೇನು ಕೌಂಟ್‌ಡೌನ್ ಸ್ಟಾರ್ಟ್ ಆಗಿದೆ. ಈ ನಡುವೆ ಜನ ಹೊಸ ವರ್ಷಾಚರಣೆಗೆ ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಘೋಷಿಸಿದೆ.

ಕೊರೊನಾ ಎರಡನೇ ಅಲೆಯಿಂದ ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ರಾಜ್ಯದ ಜನತೆಗೆ ಇದೀಗ ಮತ್ತೊಮ್ಮೆ ನೈಟ್ ಕರ್ಫ್ಯೂ ವಿಧಿಸಿರುವುದು ಭಾರೀ ಆತಂಕ ಸೃಷ್ಟಿಸಿದೆ. ಹಲವಾರು ಮಂದಿ ಈ ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ನಮಗೂ ಆರ್ಥಿಕ ಚಟುವಟಿಕೆಗಳು ನಡೆಯಲಿ ಎಂಬ ಯೋಚನೆ ಇದೆ. ಕೋವಿಡ್ ಕಾರಣದಿಂದಾಗಿ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಜನರು ಪ್ರವಾಸಿ ತಾಣ, ರೆಸಾರ್ಟ್‍ಗಳಿಗೆ ಮುಗಿಬೀಳುತ್ತಿರುವ ಬಗ್ಗೆ ಮಾತನಾಡಿದ ಅವರು, ಸಂಭ್ರಮಾಚರಣೆಗೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್ ನಿಯಮಗಳನ್ನು ಅನುಸರಿಸಲಿ. ಅವರಿಗೆ ಎಲ್ಲಿಗೆ ಬೇಕಾದರೂ ಹೋಗಲು ಸ್ವಾತಂತ್ರ್ಯ ಇದೆ. ನಿಯಮ ಪಾಲಿಸಿ ಸಂಭ್ರಮಾಚರಿಸಿಲಿ ಎಂದು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

7 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

7 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

7 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

10 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

10 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

10 hours ago