ಹೊಸ ವರ್ಷ ಆಚರಣೆ : ನಂದಿ ಬೆಟ್ಟದಲ್ಲಿ ಡಿ. 30ರ ಸಂಜೆಯಿಂದ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ – Vishwanews24
ಹೊಸ ವರ್ಷ ಆಚರಣೆ : ನಂದಿ ಬೆಟ್ಟದಲ್ಲಿ ಡಿ. 30ರ ಸಂಜೆಯಿಂದ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ – Vishwanews24
ಚಿಕ್ಕಬಳ್ಳಾಪುರ: ಹೊಸ ವರ್ಷದ ಮೊದಲ ದಿನದಂದು ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಮೋಜು, ಮಸ್ತಿಯಲ್ಲಿ ತೊಡಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಳಗಿ ತೇಲುತ್ತಿದ್ದ ಪ್ರವಾಸಿಗರಿಗೆ, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದೆ.
ಸಾಮಾನ್ಯವಾಗಿ ಜಿಲ್ಲಾಡಳಿತ ವರ್ಷದ ಕೊನೆಯ ದಿನ ಅಂದರೆ 30 ಅಥವಾ 31ರ ಸಂಜೆ 3 ರಿಂದ ಹೊಸ ವರ್ಷದ ಮೊದಲ ಜನ ಅಂದರೆ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ಮಾತ್ರ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದ ಜಿಲ್ಲಾಡಳಿತ ಇದೀಗ ಕೊರೋನಾ ಮೂರನೇ ಅಲೆಯ ಒಮಿಕ್ರೋನ್‌ಆತಂಕದ ಹಿನ್ನಲೆಯಲ್ಲಿ ಜನವರಿ 1ರಂದು ಕೂಡ ಸಂಪೂರ್ಣ ಗಿರಿಧಾಮವನ್ನು ಬಂದ್‌ಗೊಳಿಸಲು ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
2022ರ ಜನವರಿ 1 ರ ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಡಿ. 30ರ ಸಂಜೆ 6 ಗಂಟೆಯಿಂದ 2022ರ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೊರಡಿಸಿರುವ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಉಡುಪಿ : ಕ್ರಿಸ್ಮಸ್ ಆಚರಣೆ ನಮ್ಮಲ್ಲಿ ಮಾನವೀಯತೆ ಜೀವಂತಗೊಳಿಸಲಿ : ಬಿಷಪ್ ಜೆರಾಲ್ಡ್ ಲೋಬೊ – Vishwanews24
