Featured

ಹೊಸ ವರ್ಷ ಸಂಭ್ರಮಾಚರಣೆ – ವಿವಿಧೆಡೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ – Vishwanews24

ಹೊಸ ವರ್ಷ ಸಂಭ್ರಮಾಚರಣೆ – ವಿವಿಧೆಡೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಯಾವ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಲಿನ ಬಹುತೇಕ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇನ್ನು ಡಿಸೆಂಬರ್‌ 31 ಮತ್ತು ಜನವರಿ 1ರಂದು ಈ ಸ್ಥಳಗಳಿಗೆ ಪ್ರವಾಸ ಹೋಗುವುದಕ್ಕೆ ಪ್ಲಾನ್‌ ಮಾಡಿದ್ದರೆ, ಈ ಸ್ಟೋರಿಯನ್ನೊಮ್ಮೆ ಓದಿಕೊಂಡು ಯಾವ ಸ್ಥಳಗಳು ತೆರೆದಿರುತ್ತವೆ ಎನ್ನುವ ಮಾಹಿತಿ ಪಡೆದುಕೊಳ್ಳುವುದು ಅನುಕೂಲ ಆಗಲಿದೆ.

ಈಗಾಗಲೇ ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಯುವಜನತೆ ಹಾಗೂ ಪ್ರವಾಸಿ ಪ್ರಿಯರು ವಿವಿಧ ಸ್ಥಳಗಳಿಗೆ ಹೋಗಲು ಯೋಜನೆ ರೂಪಿಸಿಕೊಂಡಿರುತ್ತಾರೆ. ಆದರೆ, ಸರ್ಕಾರ ಕೆಲವು ಸ್ಥಳಗಳಲ್ಲಿ ಭಾರಿ ಜನದಟ್ಟಣೆ ಉಂಟಾಗಲಿರುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಪ್ರವಾಸಿ ತಾಣಗಳನ್ನು ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಬಂದ್‌ ಮಾಡಿದೆ. ಈ ಕುರಿತಂತೆ ಆಯಾ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಯಾವ್ಯಾವ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ನಂದಿನೆಟ್ಟಕ್ಕೆ ಪ್ರವಾಸಿಗರಿಗೆ ಅವಕಾಶವಿಲ್ಲ: ಬೆಂಗಳೂರಿನಿಂದ ಅನತಿ ದೂರದಲ್ಲಿರುವ ನಿಸರ್ಗ ಪ್ರಿಯರ ಮತ್ತು ಚಾರಣಿಗರ ಪ್ರೀತಿಯ ಪ್ರವಾಸಿ ತಾಣ ನಂದಿ ಬೆಟ್ಟವನ್ನು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1 ಬೆಳಿಗ್ಗೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ನಂದಿಬೆಟ್ಟದ ಮೇಲೆ ಕೊಠಡಿಗಳಲ್ಲಿ ತಂಗಲು ಅವಕಾಶವಿಲ್ಲ. ಡಿಸೆಂಬರ್ 31 ರಂದು ರೂಂ ಬುಕಿಂಗ್ ಗೆ ಅವಕಾಶವಿಲ್ಲ. ಸಂಜೆ ಅಥವಾ ನಾಳೆ ಅಧಿಕೃತ ಅದೇಶ ಹೊರಬೀಳಲಿದೆ. ಈ ಬಗ್ಗೆ ಪ್ರವೇಶ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗೆ ಚಿಕ್ಕಬಳ್ಳಾಪುರ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಪ್ರವಾಸಿ ತಾಣಗಳು ಬಂದ್‌: ಇನ್ನು ಬೆಂಗಳೂರಿನ ನೆರೆಹೊರೆ ಜಿಲ್ಲೆಯಾಗಿರುವ ತುಮಕೂರು ಜಿಲ್ಲೆಯಲ್ಲಿ ಹಲವು ಚಾರಣ, ನೈಸರ್ಗಿಕ ಮತ್ತು ಧಾರ್ಮಿಕ ಪ್ರವಾಸಿ ತಾಣಗಳಿವೆ. ಇಂತಹ ಪ್ರದೇಶಗಳಿಗೆ ಎರಡು ದಿನ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ತುಮಕೂರು ಜಿಲ್ಲೆಯ ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟದಲ್ಲಿ ಪ್ರವೇಶ ನಿರ್ಬಂಧ ಮಾಡಲಾಗಿದೆ. ಡಿ.31 ಬೆಳಗ್ಗೆ 8 ಗಂಟೆಯಿಂದ ಜನವರಿ 2 ತಾರೀಕು ಬೆಳಗ್ಗೆ 8 ಗಂಟೆವರೆಗೂ ನಿರ್ಬಂಧ ಮುಂದುವರಿಯಲಿದೆ.

ಹೊಸ ವರ್ಷಾಚರಣೆ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ದೇವರಾಯನದುರ್ಗದಲ್ಲಿ ತಿರುವಿನ ರಸ್ತೆ ಇರುವುದರಿಂದ ಅಪಘಾತ ಸಂಭವಿಸಲಿದೆ. ಜನರು ಗುಂಪು ಗುಂಪಾಗಿ ಸೇರುವುದರಿಂದ ವನ್ಯಜೀವಿಗಳಿಗೆ ತೊಂದರೆಯಾಗಲಿದೆ.‌ ಪ್ರವಾಸಿ ತಾಣಗಳ ಜಾಲಿ ರೇಡ್ ಗೆ ತುಮಕೂರು ಜಿಲ್ಲಾಢಳಿತ ತಂದಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವ ಸಾಧ್ಯತೆಯೂ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ದೇವರಾಯನದುರ್ಗ ಹಾಗೂ ನಾಮದ ಚಿಲುಮೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ. ಎಂದಿನಂತೆ ದಿನನಿತ್ಯ ಸಂಚರಿಸುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿಷೇಧ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿ. 31ರ ರಾತ್ರಿ 9 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ಮಾಡಲಾಗುತ್ತದೆ. ನಂತರ ಜನವರಿ 1ರ ಬೆಳಗ್ಗೆ 6 ಗಂಟೆ ನಂತರ ಸಾರ್ವಜನಿಕರು ಮತ್ತು ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ರಮೇಶ್ ಆದೇಶ ಹೊರಡಿಸಿದ್ದಾರೆ.

ವಿವಿಧೆಡೆ ಪ್ರವಾಸಿ ತಾಣಗಳ ಪ್ರವೇಶ ಮಾಹಿತಿ:

ಆನೇಕಲ್ ಸುತ್ತಮುತ್ತಲಿನ ಬನ್ನೇರುಘಟ್ಟ ಪ್ರವಾಸಿ ತಾಣ ತೆರೆದಿರುತ್ತದೆ,
ಮುತ್ಯಾಲಮಡು ಕೂಡ ಪ್ರವಾಸಿಗರಿಗೆ ಮುಕ್ತವಾಗಿರುತ್ತದೆ.
ಕೊಡಗಿನ ಎಲ್ಲಾ ಪ್ರವಾಸಿ ತಾಣಗಳು ಓಪನ್ ಆಗಿರುತ್ತವೆ.
ಚಿತ್ರದುರ್ಗ ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳು ಬಂದ್ ಆಗಿರುವುದಿಲ್ಲ.
ಹೊಸ ವರ್ಷಾಚರಣೆ ನಿಮಿತ್ಯ ಕಲಬುರಗಿ ಜಿಲ್ಲೆಯಲ್ಲಿ ಯಾವುದೇ ಪ್ರವಾಸಿ ತಾಣಗಳು ಬಂದ್ ಮಾಡಲಾಗುತ್ತಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್ ಇಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಯಾವುದೇ ಪ್ರವಾಸಿ ತಾಣಗಳು ಬಂದ್ ಇಲ್ಲ.
ಕೊಪ್ಪಳ ಜಿಲ್ಲೆಯಲ್ಲಿ ಹೊಸವರ್ಷದ ಆಚರಣೆಗೆ ಮುಕ್ತ ಅವಕಾಶ
ಗದಗ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನ ಬಂದ್ ಮಾಡುತ್ತಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಮುಕ್ತ ಆಗಿರುತ್ತವೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago