ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜ.1 ರಿಂದ ಮಾ.15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದೀಗ ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದರಿಂದಾಗಿ 3 ತಿಂಗಳ ಕಾಲ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ನಿಬರ್ಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…