ಹೊಸ ಸಿನಿಮಾಕ್ಕೆ ತಂಗಿ ಪಾತ್ರ ಮಾಡಲು ಆಡಿಶನ್​ ಇದೆ ಎಂದು ನಂಬಿಸಿ ಕರೆದು ಯುವತಿಯ ಮೇಲೆ ಅತ್ಯಾಚಾರ ; ಕನ್ನಡದ ಫೇಮಸ್ ಡ್ಯಾನ್ಸ್ ಮಾಸ್ಟರ್ ಬಂಧನ -Vishwanews24

ಬೆಂಗಳೂರು: ಕನ್ನಡದ ಖ್ಯಾತ ರಿಯಾಲಿಟಿ ಶೋಗಳ ಕೊರಿಯೋಗ್ರಾಫರ್ ಒಬ್ಬ ಸ್ಟಾರ್ ನಟನ ತಂಗಿಯ ಪಾತ್ರಕ್ಕೆ ಚಿತ್ರದ ಆಡಿಶನ್ ಇದೆ ಎಂದು ಕರೆಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಕನ್ನಡದ ಫೇಮಸ್ ಡ್ಯಾನ್ಸ್ ಮಾಸ್ಟರ್ ಪವನ್ ಯುವತಿಯನ್ನ ನಂಬಿಸಿ ದೈಹಿಕವಾಗಿ ಕಿರುಕುಳ ನೀಡಿದ್ದಾನೆ. ಇದೀಗ ಈತನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪವನ್ ಅನೇಕ ರಿಯಾಲಿಟಿ ಶೋಗಳಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದನು.

ಆರೋಪಿ ಪವನ್ ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಡ್ಯಾನ್ಸ್ ಕ್ಲಾಸ್ ಹೊಂದಿದ್ದನು. ಇದೇ ಡ್ಯಾನ್ಸ್ ಕ್ಲಾಸ್‍ನಲ್ಲಿ ಕಳೆದ ಮೂರು ವರ್ಷಗಳಿಂದ ಸಂತ್ರಸ್ತ ಯುವತಿ ಡ್ಯಾನ್ಸ್ ಕಲಿಯುತ್ತಿದ್ದರು. ಕಳೆದ ಜನವರಿ 12 ರಂದು ಯುವತಿಗೆ ಪವನ್ ಫೋನ್ ಮಾಡಿದ್ದನು. ಆಗ ಸ್ಟಾರ್ ನಟರೊಬ್ಬರ ಹೊಸ ಸಿನಿಮಾಗೆ ತಂಗಿ ಪಾತ್ರದ ಆಡಿಶನ್ ಇದೆ ಎಂದು ಹೇಳಿ ತನ್ನ ಡ್ಯಾನ್ಸ್ ಕ್ಲಾಸಿಗೆ ಯುವತಿಯನ್ನು ಕರೆಸಿಕೊಂಡಿದ್ದನು.

ಯುವತಿ ಬರುವ ಮೊದಲೇ ಆರೋಪಿ ಪವನ್ ತನ್ನ ಗೆಳೆಯನೊಬ್ಬನಿಗೆ ಫೋನ್ ಮಾಡಿ ನಿರ್ದೇಶಕನ ಸೋಗಿನಲ್ಲಿ ಯುವತಿಯ ಜೊತೆ ಮಾತನಾಡುವಂತೆ ಹೇಳಿದ್ದಾನೆ. ಅದರಂತೆಯೇ ಆತನ ಗೆಳೆಯ ನೀನು ಸ್ಟಾರ್ ನಟನ ಮುಂದಿನ ಸಿನಿಮಾಗೆ ತಂಗಿ ಪಾತ್ರಕ್ಕೆ ಆಯ್ಕೆಯಾಗಿದ್ದೀಯಾ ಎಂದು ನಂಬಿಸಿದ್ದಾನೆ. ನಂತರ ಮತ್ತು ಬರುವ ಔಷಧಿಯನ್ನು ನೀರಿನಲ್ಲಿ ಬೆರೆಸಿ ಯುವತಿಗೆ ಕುಡಿಸಿದ್ದಾನೆ. ಈ ವೇಳೆ ಡ್ಯಾನ್ಸ್ ಕ್ಲಾಸ್‍ನಲ್ಲಿ ಯುವತಿಗೆ ಮೊಬೈಲ್‍ನಲ್ಲಿ ಅಶ್ಲೀಲ ವಿಡಿಯೋಗಳನ್ನ ತೋರಿಸಿದ್ದಾನೆ. ನೀರು ಕುಡಿದ ಬಳಿಕ ಯುವತಿ ಪ್ರಜ್ಞೆ ತಪ್ಪಿದ್ದಾಗ ಆರೋಪಿ ಪವನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇದೀಗ ಸಂತ್ರಸ್ತ ಯುವತಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಪವನ್ ವಿರುದ್ಧ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ), 376(ಅತ್ಯಾಚಾರ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago