ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.
ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಇಂದಿನಿಂದಲೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತಿದೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು.
ಈ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆಯ ಮಾಹಿತಿ ಬಿಡುಗಡೆ ಮಾಡಿದ್ದು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅರ್ಜಿ ಸಲ್ಲಿಕೆಯೂ ಆರಂಭಗೊಂಡಿಲ್ಲ ಅಂತ ಸ್ಪಷ್ಟ ಪಡಿಸಿದೆ.
ಇನ್ನೂ ಇಂದಿನಿಂದ ಕೇವಲ ಬಡ ರೋಗಿಗಳು ಚಿಕಿತ್ಸೆ ಪಡೆಯೋದಕ್ಕಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ಬಯಸುವಂತವರು ಇಂದಿನಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತ ತಿಳಿಸಿದೆ.
ಹೊಸದಾಗಿ ಬಿಪಿಎಲ್ ನಂಬಿದ ಅನೇಕ ಜನರು, ಬೆಂಗಳೂರಿನಲ್ಲಿ ಬೆಂಗಳೂರು ಒನ್ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಮತ್ಯಾವುದೇ ಆನ್ ಲೈನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ದಾಂಗುಡಿಯಿಟ್ಟಿದ್ದರು. ಆದರೆ, ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವೆಬ್ ಸೈಟ್ ನಲ್ಲಿ ಅವಕಾಶ ಇಲ್ಲದೇ ಇರುವುದನ್ನು ಗಮನಿಸಿ ನಿರಾಶರಾಗಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಸ್ಪಷ್ಟನೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…