Featured

ಹೋಟೆಲ್‍ ಗಳಿಗೆ ಸದ್ಯ ಎಲ್‍ ಪಿಜಿ ಸಿಲಿಂಡರ್‌ಗಳನ್ನು ನೀಡಲು ಸಾಧ್ಯವಿಲ್ಲ , ವಿದ್ಯುತ್ ಸ್ಟವ್‍ ಗಳನ್ನು ಬಳಸಲು ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ – vishwanews24

ಹೋಟೆಲ್‍ ಗಳಿಗೆ ಸದ್ಯ ಎಲ್‍ ಪಿಜಿ ಸಿಲಿಂಡರ್‌ಗಳನ್ನು ನೀಡಲು ಸಾಧ್ಯವಿಲ್ಲ , ವಿದ್ಯುತ್ ಸ್ಟವ್‍ ಗಳನ್ನು ಬಳಸಲು  ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

ಬೆಂಗಳೂರು : ಹೋಟೆಲ್‍ಗಳಿಗೆ ಸದ್ಯ ಎಲ್‍ಪಿಜಿ ಸಿಲಿಂಡರ್‌ಗಳನ್ನು ನೀಡಲು ಸಾಧ್ಯವಿಲ್ಲ. ಬದಲಿಗೆ ಅವರು ವಿದ್ಯುತ್ ಸ್ಟವ್‍ಗಳನ್ನು ಬಳಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ನಗರದಲ್ಲಿ ತೈಲ ಪೂರೈಕೆ ಕಂಪೆನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳ ಪೂರೈಕೆ ಸದ್ಯ ಗಂಭೀರವಾಗಿದೆ. ಆದುದರಿಂದ ಸದ್ಯಕ್ಕೆ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ವಿತರಣೆಯಲ್ಲಿ ಅಡಚಣೆಯಾಗಲಿದೆ. ಇದನ್ನು ಸರಿದೂಗಿಸಲು ಎಲೆಕ್ಟ್ರಿಕ್ ಸ್ಟೌವ್‍ಗಳನ್ನು ಬಳಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ :

ಕೇಂದ್ರ ಸರಕಾರ ಕೂಡಲೇ ಇದರ ಬಗ್ಗೆ ಗಮನ ಹರಿಸಿ ಈಗಾಗಲೇ ತೈಲ ಕಂಪೆನಿಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಗತ್ಯ ಮಾಹಿತಿಗಳನ್ನು ಪಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹ ಬಳಕೆ ಎಲ್‍ಪಿಜಿಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿನಾಕಾರಣ ಗ್ರಾಹಕರು ಆತಂಕ ಪಡಬಾರದು. ಮಿತವಾಗಿ ಬಳಸಬೇಕು ಮತ್ತು ಯಾವುದೇ ಕಾರಣಕ್ಕೂ ಡಬ್ಬಲ್ ಬುಕ್ಕಿಂಗ್ ಮಾಡಬೇಡಿ ಎಂದು ಅವರು ಕೋರಿದರು.

ಈಗಾಗಲೇ ಅನಿಲ ಪೂರೈಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಳ್ಳುತ್ತಿದೆ. ಮಧ್ಯಪ್ರಾಚ್ಯದಿಂದ ಬಂದಿರುವ ಮೂರ್ನಾಲ್ಕು ಹಡಗುಗಳು ಸಾಕಷ್ಟು ಅನಿಲವನ್ನು ತಂದಿವೆ. ಸಂಪೂರ್ಣವಾಗಿ ರೀಫಿಲ್ಲಿಂಗ್ ಆಗಿ ಗ್ರಾಹಕರ ಕೈಸೇರಲು ಇನ್ನು ಕೆಲವು ದಿನಗಳು ಇಂತಹ ಸಮಸ್ಯೆಗಳು ಎದುರಾಗಬಹುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ ಪಿಟಿಸಿಎಲ್ ಕಾಯ್ದೆ ಮಂಜೂರಾತಿ ಷರತ್ತು ಉಲ್ಲಂಘಿಸಿ ನಡೆದ ಮೊದಲ ಮಾರಾಟ ಪ್ರಕ್ರಿಯೆ ಅಸಿಂಧುಗೊಂಡರೆ ನಂತರದ ಎಲ್ಲ ಮಾರಾಟ ಪ್ರಕ್ರಿಯೆಗಳೂ ರದ್ದಾಗಲಿವೆ : ಹೈಕೋರ್ಟ್

ಮೊದಲ ಆದ್ಯತೆಯಾಗಿ ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳು, ಏರ್‌ ಲೈನ್, ರೈಲ್ವೆ ಕ್ಯಾಂಟೀನ್‍ಗಳಿಗೆ ಶೇ.100ರಷ್ಟು ಸಿಲಿಂಡರ್ ನೀಡಲು ಒಪ್ಪಿಗೆ ನೀಡಲಾಗಿದೆ. ಆರೂವರೆ ಸಾವಿರ ಸಿಲಿಂಡರ್‌ ಗಳ ಪ್ರತಿದಿನ ಖರ್ಚಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಇದರಲ್ಲಿ 4,200ಸಿಲಿಂಡರ್ ಅಗತ್ಯ ವಲಯಕ್ಕೆ ಪೂರೈಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ :

ಆಟೋಗ್ಯಾಸ್ ಪೂರೈಕೆ ಮಾಡಲಾಗುತ್ತಿದೆ. ಆದರೆ, ಹೋಟೆಲ್‍ಗಳಿಗೆ ಸದ್ಯಕ್ಕೆ ಪೂರೈಕೆ ಆಗುವುದಿಲ್ಲ. ಕಾಳಸಂತೆಯಲ್ಲಿ ಸಿಲಿಂಡರ್‌ ಗಳನ್ನು ದಾಸ್ತಾನು ಮಾಡಿರುವವರ ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿದೆ. ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಹೋಟೆಲ್‍ಗಳಿವೆ. ಅದರಲ್ಲಿ ನಾಲ್ಕುವರೆ ಸಾವಿರ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ನಿತ್ಯ 44 ಸಾವಿರ ಎಲ್‍ಪಿಜಿ ಸಿಲಿಂಡರ್ ಬೇಕು, ಆದರೆ ವ್ಯತ್ಯಯ ಉಂಟಾಗಿದೆ ಎಂದು ಅವರು ವಿವರ ನೀಡಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರಕ್ಕೆ ಪತ್ರ ಬರೆದು ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಅವರು ವಿವರಿಸಿದ್ದಾರೆ. ಇದೀಗ ಕೇವಲ ಅಗತ್ಯ ವಲಯಕ್ಕೆ ಒಂದು ಸಾವಿರ ವಾಣಿಜ್ಯ ಸಿಲಿಂಡರ್‍ಗಳನ್ನು ಮಾತ್ರ ನೀಡಲಾಗುತ್ತಿದೆ. ಹೀಗಾಗಿ ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ :

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago