Featured

ಹೋಟೆಲ್‌ ಉದ್ಯಮಿ ಹತ್ಯೆ ಪ್ರಕರಣ : ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ – vishwanews24

ಹೋಟೆಲ್‌ ಉದ್ಯಮಿ ಹತ್ಯೆ ಪ್ರಕರಣ : ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಮುಂಬೈ: 2001 ರಲ್ಲಿ ಹೋಟೆಲ್‌ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ ಅಪರಾಧಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (MCOCA) ಅಡಿಯಲ್ಲಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು ರಾಜನ್ ದೋಷಿ ಎಂದು ತೀರ್ಪು ನೀಡಿದ್ದಾರೆ.

ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಾಮ್‌ದೇವಿಯಲ್ಲಿರುವ ಗೋಲ್ಡನ್ ಕ್ರೌನ್ ಹೋಟೆಲ್‌ನ ಮಾಲೀಕರಾಗಿದ್ದರು. ಇವರಿಗೆ ಛೋಟಾ ರಾಜನ್ ಗ್ಯಾಂಗ್‌ನಿಂದ ಸುಲಿಗೆ ಕರೆಗಳು ಬರುತ್ತಿದ್ದವು. 2001ರ ಮೇ 4 ರಂದು ಹೋಟೆಲ್‌ನಲ್ಲಿ ರಾಜನ್‌ ಗ್ಯಾಂಗ್‌ನ ಇಬ್ಬರು ಸದಸ್ಯರು ಶೆಟ್ಟಿಯನ್ನು ಗುಂಡಿಕ್ಕಿ ಕೊಂದರು.

ಆರಂಭದಲ್ಲಿ ಬೆದರಿಕೆಯಿಂದಾಗಿ ಮಹಾರಾಷ್ಟ್ರ ಪೊಲೀಸರು ಹೋಟೆಲ್‌ ಮಾಲೀಕನಿಗೆ ಭದ್ರತೆ ಒದಗಿಸಿದ್ದರು. ಆದರೆ, ಕೊಲೆಯಾಗುವ ಎರಡು ತಿಂಗಳ ಮೊದಲು ಅವರ ಭದ್ರತೆಯನ್ನು ಹಿಂಪಡೆಯಲಾಗಿತ್ತು. 2015 ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದಲ್ಲಿ ಬಂಧಿಸಿದ ನಂತರ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಬಳಿಕ ಛೋಟಾ ರಾಜನ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದೆ.

ಇಬ್ಬರು ಶೂಟರ್‌ಗಳು ಜಯ ಶೆಟ್ಟಿಯನ್ನು ಗುಂಡಿಕ್ಕಿ ಕೊಂದಿದ್ದರು. ಹೋಟೆಲ್‌ನ ಮ್ಯಾನೇಜರ್ ಮತ್ತು ಉದ್ಯೋಗಿ ಶೂಟರ್‌ಗಳನ್ನು ಬೆನ್ನಟ್ಟಿ ಅವರಲ್ಲಿ ಒಬ್ಬನನ್ನು ಹಿಡಿದಿದ್ದರು. 2018 ರಲ್ಲಿ, ವೋರಾ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು. ಆದರೆ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago