Featured

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ -Vishwanews24

2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.

ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.

ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ರಕ್ಷಿತ್ ಶೆಟ್ಟಿ ಪಾಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.

ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ.

ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ.

ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ. ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ.

ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು

ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಇನ್ನೂ ಗೊಂದಲ ; ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ : ಯು.ಟಿ.ಖಾದರ್ -Vishwanews24

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago