Featured

ಹ್ಯಾಲೋವೀನ್  ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು – Vishwanews24

ಹ್ಯಾಲೋವೀನ್  ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು

ಸಿಯೋಲ್: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ  ಶನಿವಾರ ನಡೆದ ಹ್ಯಾಲೋವೀನ್  ದುರಂತದಲ್ಲಿ ಮೃತಪಟ್ಟವರ ಗುಂಪಿನಲ್ಲಿ ಖ್ಯಾತ ಗಾಯಕ ಹಾಗೂ ನಟನೊಬ್ಬನೂ ಸೇರಿದ್ದ ಎಂಬ ಸುದ್ದಿ ತಿಳಿದು ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಯೋಲ್‌ನ ಇಟಾವಾನ್  ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ  ನಟ, ಗಾಯಕ ಲೀ ಜಿಹಾನ್ ಮೃತಪಟ್ಟಿರುವುದಾಗಿ ದೃಢವಾಗಿದೆ. 24 ವರ್ಷದ ತಾರೆಯ ಹಠಾತ್ ನಿಧನಕ್ಕೆ ಅವರ ಕುಟುಂಬ, ಅಭಿಮಾನಿಗಳು ಸೇರಿದಂತೆ ಅಲ್ಲಿನ ಜನತೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಲೀ ಜಿಹಾನ್ ಅವರು ದಕ್ಷಿಣ ಕೊರಿಯಾದ ಗಾಯನ ಸ್ಪರ್ಧೆಯ ಪ್ರೊಡ್ಯೂಸ್ 101 ರಲ್ಲಿ ಮಾಜಿ ಸ್ಪರ್ಧಿಯಾಗಿದ್ದಾರೆ. ಅವರು ಟುಡೇ ವಾಸ್ ಅನದರ್ ನಾಮ್ ಹ್ಯುನ್ ಡೇ ಮೂಲಕ ನಟನಾ ಕ್ಷೇತಕ್ಕೆ ಪಾದಾರ್ಪಣೆ ಮಾಡಿದರು. ವರದಿಗಳ ಪ್ರಕಾರ, ಲೀ ಜಿ ಹಾನ್ ಅವರ ಅಂತ್ಯಕ್ರಿಯೆ ನವೆಂಬರ್ 1 ರಂದು ನಡೆಯಲಿದೆ. ಇದನ್ನೂ ಓದಿ: ಮಂಗಳೂರು: ಹೃದಯಾಘಾತದಿಂದ ಯುವಕ ನಿಧನ – Vishwanews24

2 ವರ್ಷದ ಕೋವಿಡ್ ನಿರ್ಬಂಧವನ್ನು ತೆಗೆದು ಹಾಕಿದ ಬಳಿಕ ಇದು ದಕ್ಷಿಣ ಕೊರಿಯಾದ ಮೊದಲ ಹ್ಯಾಲೋವೀನ್ ಆಚರಣೆಯಾಗದೆ. ಶನಿವಾರ ಹಬ್ಬದ ವಾತಾವರಣದಲ್ಲಿ ಇಟಾವಾನ್‌ನ ಕಿರಿದಾದ ಒಂದು ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಹೆಚ್ಚಿನವರು ಉಸಿರುಗಟ್ಟಿ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರಲ್ಲಿ ಹೆಚ್ಚಿನವರು 20 ವರ್ಷದ ಆಸುಪಾಸಿನವರು ಎಂಬುದು ಇನ್ನಷ್ಟು ಆಘಾತ ತಂದಿದೆ.

ವರದಿಗಳ ಪ್ರಕಾರ ಸಿಯೋಲ್‌ನ ಹ್ಯಾಲೋವೀನ್ ದುರಂತದಲ್ಲಿ 151 ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್-ಯೋಲ್ ರಾಷ್ಟ್ರೀಯ ಶೋಕಾಚರಣೆಯ ಅವಧಿಯನ್ನು ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ವಿಟ್ಲ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಮುಡಿಪುವಿನಲ್ಲಿ ಪತ್ತೆ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago