Featured

₹13.88 ಕೋಟಿ ಆಸ್ತಿ ಒಡತಿ ಶೋಭಾ ಕರಂದ್ಲಾಜೆ – Vishwanews24

₹13.88 ಕೋಟಿ ಆಸ್ತಿ ಒಡತಿ ಶೋಭಾ ಕರಂದ್ಲಾಜೆ : ಇವರ ಬಳಿ ಇದೆ 1 ಕೆಜಿ ಚಿನ್ನದ ಬಿಸ್ಕೆಟ್

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಸ್ತಿಯಲ್ಲಿ ಶೇ.25ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. ಕಳೆದ ಬಾರಿ 10.48 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದ ಅವರು ಇಂದು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಪ್ರಮಾಣ ಪತ್ರದಲ್ಲಿ 13.88 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 9,23,66,910 ಮೌಲ್ಯದ ಚರಾಸ್ತಿ, 4,65,00,000 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. 4,06,00,640 ರೂ. ಸಾಲ ಮಾಡಿದ್ದಾರೆ. 1,71,000 ರೂ. ನಗದು ಹೊಂದಿದ್ದು, ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 69,60,976 ರೂ. ಠೇವಣಿ ಹಾಗು 10 ರೂ. ಮುಖಬೆಲೆಯ 5,000 ಸಾವಿರ ಶೇರುಗಳನ್ನು ಹೊಂದಿದ್ದಾರೆ.

1 ಕೆ.ಜಿ ಚಿನ್ನದ ಬಿಸ್ಕೆಟ್(ಮಾರುಕಟ್ಟೆ ಮೌಲ್ಯ 68,40,000), 650 ಗ್ರಾಂ ಚಿನ್ನದ ಆಭರಣ, 1620 ಗ್ರಾಂ ಬೆಳ್ಳಿ(ಚಿನ್ನದ ಆಭರಣ ಮತ್ತು ಬೆಳ್ಳಿ ಮೌಲ್ಯ 40,00,000 ರೂ.) ಹೋಂಡಾ ಆ್ಯಕ್ಟಿವಾ ಸ್ಕೂಟರ್ ಹೊಂದಿದ್ದಾರೆ.

ಪಿಎಂಎಲ್ ಕಾಯ್ದೆಯಡಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ವಿಶೇಷ ಪ್ರಕರಣ 124/2014ರ ವಿವರವನ್ನು ಪ್ರಮಾಣಪತ್ರದಲ್ಲಿ ನೀಡಿದ್ದಾರೆ.

ಬಿಎ ಪದವಿ, ಮಂಗಳೂರು ವಿವಿಯಲ್ಲಿ ಎಂಎಸ್‌ಡಬ್ಲ್ಯೂ ಹಾಗೂ ಎಂಎಸ್ಓಯುನಲ್ಲಿ ಎಂಎ ಸೋಷಿಯಾಲಜಿ ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. 2014ರಲ್ಲಿ 7.20 ಕೋಟಿ ಆಸ್ತಿ ಘೋಷಿಸಿಕೊಂಡಿದ್ದ ಶೋಭಾ ಕರಂದ್ಲಾಜೆ 2019ರಲ್ಲಿ 10.48 ಕೋಟಿ ಆಸ್ತಿ ಘೋಷಿಸಿಕೊಂಡಿದ್ದರು. ಇದೀಗ ಆಸ್ತಿ ಮೌಲ್ಯ 13,88,66,910 ರೂ. ಆಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

22 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago