ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಸ್ತಿಯಲ್ಲಿ ಶೇ.25ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. ಕಳೆದ ಬಾರಿ 10.48 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದ ಅವರು ಇಂದು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಪ್ರಮಾಣ ಪತ್ರದಲ್ಲಿ 13.88 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 9,23,66,910 ಮೌಲ್ಯದ ಚರಾಸ್ತಿ, 4,65,00,000 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. 4,06,00,640 ರೂ. ಸಾಲ ಮಾಡಿದ್ದಾರೆ. 1,71,000 ರೂ. ನಗದು ಹೊಂದಿದ್ದು, ವಿವಿಧ ಬ್ಯಾಂಕ್ಗಳ ಉಳಿತಾಯ ಖಾತೆಯಲ್ಲಿ 69,60,976 ರೂ. ಠೇವಣಿ ಹಾಗು 10 ರೂ. ಮುಖಬೆಲೆಯ 5,000 ಸಾವಿರ ಶೇರುಗಳನ್ನು ಹೊಂದಿದ್ದಾರೆ.
1 ಕೆ.ಜಿ ಚಿನ್ನದ ಬಿಸ್ಕೆಟ್(ಮಾರುಕಟ್ಟೆ ಮೌಲ್ಯ 68,40,000), 650 ಗ್ರಾಂ ಚಿನ್ನದ ಆಭರಣ, 1620 ಗ್ರಾಂ ಬೆಳ್ಳಿ(ಚಿನ್ನದ ಆಭರಣ ಮತ್ತು ಬೆಳ್ಳಿ ಮೌಲ್ಯ 40,00,000 ರೂ.) ಹೋಂಡಾ ಆ್ಯಕ್ಟಿವಾ ಸ್ಕೂಟರ್ ಹೊಂದಿದ್ದಾರೆ.
ಪಿಎಂಎಲ್ ಕಾಯ್ದೆಯಡಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ವಿಶೇಷ ಪ್ರಕರಣ 124/2014ರ ವಿವರವನ್ನು ಪ್ರಮಾಣಪತ್ರದಲ್ಲಿ ನೀಡಿದ್ದಾರೆ.
ಬಿಎ ಪದವಿ, ಮಂಗಳೂರು ವಿವಿಯಲ್ಲಿ ಎಂಎಸ್‌ಡಬ್ಲ್ಯೂ ಹಾಗೂ ಎಂಎಸ್ಓಯುನಲ್ಲಿ ಎಂಎ ಸೋಷಿಯಾಲಜಿ ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. 2014ರಲ್ಲಿ 7.20 ಕೋಟಿ ಆಸ್ತಿ ಘೋಷಿಸಿಕೊಂಡಿದ್ದ ಶೋಭಾ ಕರಂದ್ಲಾಜೆ 2019ರಲ್ಲಿ 10.48 ಕೋಟಿ ಆಸ್ತಿ ಘೋಷಿಸಿಕೊಂಡಿದ್ದರು. ಇದೀಗ ಆಸ್ತಿ ಮೌಲ್ಯ 13,88,66,910 ರೂ. ಆಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…